Recent Posts

Monday, January 20, 2025
ಹೆಚ್ಚಿನ ಸುದ್ದಿ

ಭಾರತೀಯ ಸೈನಿಕರ ಮೇಲೆ ಉಗ್ರರ ದಾಳಿ; ಓರ್ವ ಯೋಧ ಹುತಾತ್ಮ, ಮೂವರು ಯೋಧರಿಗೆ ಗಾಯ-ಕಹಳೆ ನ್ಯೂಸ್

ಶ್ರೀನಗರ, : ಜಮ್ಮು-ಕಾಶ್ಮೀರದ ಕುಲ್ಗಾಂನ ಖನಬಾಲ್‍ನ ಸಂಶೀಪುರದಲ್ಲಿ ಭಾರತೀಯ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮೂವರು ಯೋಧರಿಗೆ ಗಾಯಗಳಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಎಂದಿನಂತೆ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಆದರೆ ಗಾಯಗೊಂಡಿದ್ದ ನಾಲ್ವರು ಯೋಧರ ಪೈಕಿ ಓರ್ವ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆ ಎಂದು ಸೇನಾಮೂಲಗಳು ತಿಳಿಸಿದ್ದು, ಘಟನಾ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದಿದ್ದು, ಜಂಟಿ ಕಾರ್ಯಚರಣೆ ನಡೆಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು