ಪುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕ್ರಿಯೆ ಮುಕ್ತಾಯ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್- ಕಹಳೆ ನ್ಯೂಸ್
ಪುತ್ತೂರು; ಗ್ರಾಮ ಪಂಚಾಯತ್ಗಳಿಗೆ ಚುನಾವಣೆ ನಡೆದು ಮೊದಲ 30 ತಿಂಗಳ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯು ಪುತ್ತೂರು ಪುರಭವನದಲ್ಲಿ ನಡೆಯಿತು.
2ನೇ ದಿನವಾದ ಜ.28ರಂದು ಮದ್ಯಾಹ್ನದ ನಂತರ ಪುತ್ತೂರು ತಾಲೂಕಿನ ಗ್ರಾಮ ಪಂಚಾಯತ್ಗಳಿಗೆ ಸಂಬಂಧಿಸಿ ಮೀಸಲಾತಿ ನಿಗದಿಗೊಳಿಸುವ ಪ್ರಕ್ರಿಯೆ ನಡೆದಿದೆ. ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿಯವರ ನೇತೃತ್ವದಲ್ಲಿ ನಡೆದ ಮೀಸಲಾತಿ ಪ್ರಕ್ರಿಯೆಯಲ್ಲಿ ಅಪರ ಜಿಲ್ಲಾಧಿಕಾರಿ ರೂಪಾ, ಕಾರ್ಯನಿರ್ವಾಹಣ ಅಧಿಕಾರಿ ನವೀನ್ ಭಂಡಾರಿ ಉಪಸ್ಥಿತರಿದ್ದರು. ಇಂದಿಗೆ ಪುತ್ತೂರು, ಕಡಬ, ಬೆಳ್ತಂಗಡಿ, ಸುಳ್ಯ ಸೇರಿದಂತೆ ಒಟ್ಟು 4ತಾಲೂಕುಗಳ ಮೀಸಲಾತಿ ಪ್ರಕ್ರಿಯೆ ಮುಕ್ತಾಯಗೊಂಡಿತು.