ಸೋಲು ಗೆಲುವು ಜೀವನದ ಮೆಟ್ಟಿಲು, ಗೆಲ್ಲುತ್ತೇನೆ ಎಂಬ ಆತ್ಮವಿಶ್ವಾಸದೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು:ಆದರ್ಶ್ ಚೊಕ್ಕಾಡಿ-ಕಹಳೆ ನ್ಯೂಸ್
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದ ಆಶ್ರಯದಲ್ಲಿ ಕಾಲೇಜಿನ ಐಕ್ಯೂಎಸಿ ಮತ್ತು ಲಲಿತ ಕಲಾ ಸಂಘ, ಸ್ಪರ್ಧಾ ಸಮಿತಿಗಳು ಆಯೋಜಿಸಿದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ‘ವಿವೇಕಾನಂದ ಜಯಂತಿ ಸಾಹಿತ್ಯ – ಸಾಂಸ್ಕೃತಿಕ ಸ್ಪರ್ಧೆಗಳು ಮತ್ತು ಬಹುಮಾನ ವಿತರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದ ವಿಟ್ಲ, ವಿಠಲ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಆದರ್ಶ್ ಚೊಕ್ಕಾಡಿ ಜೀವನದಲ್ಲಿ ದೃಢ ಮನಸ್ಸು ಮತ್ತು ಇಚ್ಛಾಶಕ್ತಿ ಇದ್ದರೆ ಏನು ಬೇಕಾದರು ಸಾಧಿಸಬಹುದು.
ಸೋಲು ಗೆಲುವು ಜೀವನದ ಮೆಟ್ಟಿಲು, ಗೆಲ್ಲುತ್ತೇನೆ ಎಂಬ ಆತ್ಮವಿಶ್ವಾಸದೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಇತ್ತೀಚಿನ ದಿನಗಳಲ್ಲಿ ಜನ ಭಾರತೀಯ ಸಂಸ್ಕೃತಿಯನ್ನು ಬಿಟ್ಟು ಪಾಶ್ಚಾತ್ಯ ಸಂಸ್ಕೃತಿ ಕಡೆ ಮುಖ ಮಾಡಿದ್ದಾರೆ. ಅಂತಹ ಪಾಶ್ಚಾತ್ಯ ಸಂಸ್ಕೃತಿಗಳಿಗೆ ಮಾರುಹೋಗದೆ ನಮ್ಮ ಸಂಸ್ಕೃತಿಯನ್ನು ಉಳಿಸಬೇಕು. ವಿವೇಕಾನಂದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್ ಮಾತನಾಡಿ, ಆತ್ಮಸ್ಥೈರ್ಯದಿಂದ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗವಹಿಸುವುದು ಉತ್ತಮ, ಅದರೊಂದಿಗೆ ಮಹಾನುಭಾವರ ವ್ಯಕ್ತಿತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಭಾವನೆ ಮತ್ತು ಧೈರ್ಯವನ್ನು ಬೆಳೆಸುವುದಕ್ಕೆ ಇಂತಹ ಸ್ಫರ್ಧೆಗಳು ದಾರಿದೀಪವಾಗಬೇಕು ಎಂದು ಹೇಳಿದರು. ಪ್ರತಿವರ್ಷದಂತೆ ವಿವೇಕಾನಂದ ಜಯಂತಿ ಪ್ರಯುಕ್ತ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆದವು.ಈ ಸ್ಪರ್ಧೆಗಳಲ್ಲಿ ವಿವೇಕಾನಂದ ವಿದ್ಯಾ ಸಂಸ್ಥೆಗಳು ಭಾಗವಹಿಸದಿರುವುದು ವಿಶೇಷ ಈ ಬಾರಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿ ರಾಜೇಶ್ ಪ್ರಥಮ ಸ್ಥಾನ ಹಾಗೂ ಬೆಟ್ಟಂಪಾಡಿ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿ ರಂಜಿತಾ ಜಿ. ದ್ವೀತಿಯ ಸ್ಥಾನ ಪಡೆದುಕೊಂಡರು. ಹಿಂದಿ ಪ್ರಬಂಧ ಸ್ಪರ್ಧೆಯಲ್ಲಿ ಬಸೂರಿನ ಶ್ರೀ ಶಾರದ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಶೆಟ್ಟಿ ಪ್ರಥಮ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿನಿ ಸ್ನಿಗ್ಧ ಎ.ಜೆ ದ್ವೀತಿಯ ಸ್ಥಾನ ಪಡೆದುಕೊಂಡರು. ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಬೆಟ್ಟಂಪಾಡಿ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕವಿತಾ ಎಸ್. ಪೈ ಪ್ರಥಮ, ಮಡಂತ್ಯಾರ್‌ನ ಸೇಕ್ರೇಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿನಿ ವರ್ಷ ಕಾಮತ್ ದ್ವೀತಿಯ ಬಹುಮಾನ ಪಡೆದುಕೊಂಡರು. ಸಂಸ್ಕೃತ ಪ್ರಬಂಧ ಸ್ಪರ್ಧೆಯಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ವಿದ್ಯಾರ್ಥಿನಿ ಅನುಶ್ರೀ ಪ್ರಥಮ ಹಾಗೂ ಪುತ್ತೂರಿನ ಸಂತ ಫೀಲೋಮಿನ ಕಾಲೇಜಿನ ವಿದ್ಯಾರ್ಥಿನಿ ಚೆನ್ನಬಸವಮ್ಮ ದ್ವೀತಿಯ ಸ್ಥಾನ ಪಡೆದುಕೊಂಡರು. ಭಗವದ್ಗೀತೆ ಪಠಣದಲ್ಲಿ ಸುಬ್ರಮಣ್ಯದ ಕೆ.ಎಸ್.ಎಸ್. ಕಾಲೇಜಿನ ವಿದ್ಯಾರ್ಥಿನಿ ಸಂಧ್ಯಾ ಹೆಚ್. ಪ್ರಥಮ, ಮಂಗಳೂರಿನ ಕೆನರಾ ಕಾಲೇಜಿನ ವಿದ್ಯಾರ್ಥಿನಿ ಶ್ರೀವಿದ್ಯಾ ಎ. ದ್ವಿತೀಯ ಸ್ಥಾನ ಗಳಿಸಿದರು. ಶಾಸ್ತ್ರೀಯ ಸಂಗೀತದಲ್ಲಿ ಮುರ್ನಾಡು ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶ್ರೀರಕ್ಷಾ ಪಿ. ಪಿ. ಪ್ರಥಮ, ಮಂಗಳೂರಿನ ಕೆನರಾ ಕಾಲೇಜಿನ ವಿದ್ಯಾರ್ಥಿನಿ ವರ್ಷಿಣಿ ಕೆ ದ್ವಿತೀಯ ಸ್ಥಾನ ಪಡೆದರು. ಭಾವಗೀತೆಯಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ವಿದ್ಯಾರ್ಥಿ ಯಶ್ವಂತ್ ಪ್ರಥಮ, ಪುತ್ತೂರಿನ ಸಂತ ಫೀಲೋಮಿನ ಕಾಲೇಜಿನ ವಿದ್ಯಾರ್ಥಿನಿ ಪ್ರತಿಮಾ ಎ. ದ್ವೀತಿಯ ಸ್ಥಾನ ಪಡೆದುಕೊಂಡರು. ಕನ್ನಡ ಭಾಷಣ ಸ್ಪರ್ಧೆಯಲ್ಲಿ ಬೆಟ್ಟಂಪಾಡಿ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿ ಸಜೀತ್ ಕೆ. ಪ್ರಥಮ, ಪುತ್ತೂರಿನ ಸಂತ ಫೀಲೋಮಿನ ಕಾಲೇಜಿನ ವಿದ್ಯಾರ್ಥಿನಿ ಶ್ರೀದೇವಿ ಕೆ. ದ್ವಿತೀಯ ಸ್ಥಾನ ಪಡೆದರು. ಮಂಗಳೂರಿನ ಕೆನರಾ ಕಾಲೇಜ್ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತ್ತು.ವ ತೃತೀಯ ಬಿ.ಎಸ್ಸಿ ವಿದ್ಯಾರ್ಥಿನಿ ಮಾನಸ ಪ್ರಾರ್ಥಿಸಿದರು. ಐಕ್ಯೂಎಸಿ ಸಂಯೋಜಕ ಪ್ರೊ ಶಿವಪ್ರಸಾದ್ ಪ್ರಸ್ಥಾಪಿಸಿ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ವಿನುತಾ ವಂದಿಸಿ, ಕನ್ನಡ ವಿಭಾಗದ ಉಪನ್ಯಾಸಕ ಮನಮೋಹನ ಕಾರ್ಯಕ್ರಮವನ್ನು ನಿರೂಪಿಸಿದರು.