Monday, January 20, 2025
ಬಂಟ್ವಾಳ

ಬಂಟ್ವಾಳ ತಾಲೂಕಿನ ಹಲವೆಡೆ ಇಂದು ಪಲ್ಸ್ ಪೋಲಿಯೋ ಅಭಿಯಾನ –ಕಹಳೆ ನ್ಯೂಸ್

ಬಂಟ್ವಾಳ : ತಾಲೂಕು ವೈದ್ಯಾಧಿಕಾರಿ ಡಾ. ದೀಪಾ ಪ್ರಭು ಅವರು ತಾಲೂಕಿನಲ್ಲಿ ಇಂದಿನಿಂದ ಸವಜಾತ ಶಿಶುವಿನಿಂದ 5 ವರ್ಷ ಒಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವ ಸಿದ್ಧತೆ ಆರೋಗ್ಯ ಇಲಾಖೆಯಿಂದ ನಡೆದಿದೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೇ ತಾಲೂಕಿನಲ್ಲಿ ಒಟ್ಟು 30.352 ಮಕ್ಕಳಿಗೆ ಲಸಿಕೆ ಹಾಕಲು 190 ಬೂತುಗಳನ್ನು ಸಿದ್ಧತೆ ಮಾಡಲಾಗಿದ್ದು, ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ತಿಳಿಸಿದರು. ಹಾಗೂ ಪ್ರಯಾಣ ಬೆಳೆಸುವ ಸಾರ್ವಜನಿಕರಿಗೆ ಮತ್ತಷ್ಟು ಸಹಕಾರ ಆಗುವಂತೆ ಪುದು, ಬಿ.ಸಿ.ರೋಡ್ ಸರಕಾರಿ ಹಾಗೂ ಖಾಸಗಿ, ವಿಟ್ಲ ಸರಕಾರಿ ಮತ್ತು ಖಾಸಗಿ, ಕುರ್ನಾಡು ಬಸ್ ನಿಲ್ದಾಣಗಳಲ್ಲಿ ಒಟ್ಟು 6 ಟ್ರಾನ್ಸಿಟ್ ಬೂತ್‍ಗಳನ್ನು ಸ್ಥಾಪಿಸಲಾಗಿದೆ. ಹಾಗೂ ಡಾ. ದೀಪಾ ಪ್ರಭು ಅವರು ತಮ್ಮ ಮಕ್ಕಳಿಗೆ ಇಂದು ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು