Monday, January 20, 2025
ಹೆಚ್ಚಿನ ಸುದ್ದಿ

ಬಿಜೆಪಿಗೆ ಸೇರ್ಪಡೆಯಾದ ರಾಜೀವ್ ಬ್ಯಾನರ್ಜಿ ಮತ್ತು ಇತರ ಟಿಎಂಸಿ ಮುಖಂಡರು-ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇತ್ತೀಚೆಗೆ ತೃಣಮೂಲ ಕಾಂಗ್ರೆಸ್ ತೊರೆದಿದ್ದ ಪಶ್ಚಿಮ ಬಂಗಾಳದ ಮಾಜಿ ಸಚಿವ ರಾಜೀವ್ ಬ್ಯಾನರ್ಜಿ ಮತ್ತು ಇತರ ಟಿಎಂಸಿ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೂ ಹೂಗ್ಲಿ ಜಿಲ್ಲೆಯ ಶಾಸಕ ಪ್ರಬೀರ್ ಘೋಶಾಲ್, ಹೌರಾದ ಮಾಜಿ ಮೇಯರ್ ರತಿನ್ ಚಕ್ರವರ್ತಿ, ರಾಜೀವ್ ಬ್ಯಾನರ್ಜಿ, ಟಿಎಂಸಿ ಉಚ್ಛಾಟಿತ ಶಾಸಕಿ ವೈಶಾಲಿ ದಾಲ್ಮಿಯಾ, ನಟ ರುದ್ರಾನಿಲ್ ಘೋಷ್, ಮತ್ತು ಮಾಜಿ ಶಾಸಕ ಪಾರ್ಥ ಸಾರಥಿ ಚಟರ್ಜಿ ಬಿಜೆಪಿಗೆ ಸೇರ್ಪಡೆಯಾಗಿದ್ದು, ಅಲ್ಲದೇ ಟಿಎಂಸಿ ಬಂಡಾಯ ನಾಯಕರು ಪಕ್ಷ ಸೇರಿದ ನಂತರ ಪ್ರತಿಕ್ರಿಯೆ ನೀಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯಾ, “ಬಿಜೆಪಿ ಪಕ್ಷಕ್ಕೆ ಅವರೆಲ್ಲರೂ ಕೂಡಾ ಸೇರ್ಪಡೆಗೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು