Saturday, November 23, 2024
ಹೆಚ್ಚಿನ ಸುದ್ದಿ

ಸವದತ್ತಿ ಯಲ್ಲಮ್ಮ ದೇವಿಯ ದೇವಸ್ಥಾನ ನಾಳೆಯಿಂದ ಓಪನ್-ಕಹಳೆ ನ್ಯೂಸ್

ಬೆಳಗಾವಿ : ದೇವಸ್ಥಾನದ ಆಡಳಿತಾಧಿಕಾರಿ ಮತ್ತು ವಿಭಾಗಾಧಿಕಾರಿ ರವಿ ಕೋಟಾರಗಸ್ತಿ ಅವರು ಕೊರೋನಾದಿಂದಾಗಿ ಬಂದ್ ಆಗಿದ್ದ ಐತಿಹಾಸಿಕ ಸವದತ್ತಿ ಯಲ್ಲಮ್ಮ ದೇವಿಯ ದೇವಸ್ಥಾನ ಫೆಬ್ರವರಿ 1 ರಿಂದ ಭಕ್ತರ ದರ್ಶನಕ್ಕಾಗಿ ಮುಕ್ತ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೂ ಕೊರೋನಾ ಮಾಹಾಮಾರಿಯಿಂದಾಗಿ ದೇಶದಲ್ಲಿ ಕಳೆದ ಮಾರ್ಚ್ 23 ರಂದು ಲಾಕ್‍ಡೌನ್ ಜಾರಿಯಾದ ಬಳಿಕ 11 ತಿಂಗಳಿನಿಂದ ಸವದತ್ತಿ ಯಲ್ಲಮ್ಮ ದೇವಿ ದರ್ಶನವನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಮತ್ತು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಕರ್ನಾಟಕ, ಮಹಾರಾಷ್ಟ್ರ ಗೋವಾ, ಆಂಧ್ರಪ್ರದೇಶ ಸೇರಿದಂತೆ ಲಕ್ಷಾಂತರ ಭಕ್ತರು ಆಗಮಿಸುತ್ತಿರುವುದರಿಂದ ಕೊರೋನಾ ವೈರಸ್ ಭೀತಿಯಿಂದಾಗಿ ಪ್ರವೇಶ ನಿಷೇಧಿಸಲಾಗಿತ್ತು.

ಆದರೆ ಈಗ ಫೆಬ್ರವರಿ 1 ರಿಂದ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಅವಕಾಶ ನೀಡುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಆದೇಶ ನೀಡಿದ್ದು, ಸಾಮಾಜಿಕ ಅಂತರ, ಸ್ಯಾನಿಟೈಜರ್ ಸೇರಿದಂತೆ ಕೋವಿಡ್ ನಿಯಮ ಉಲ್ಲಂಘನೆಯಾಗದಂತೆ ಭಕ್ತರಿಗೆ ಅವಕಾಶ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.