Recent Posts

Monday, January 20, 2025
ಬೆಂಗಳೂರು

ಕೋವಿಡ್ ಲಸಿಕೆ ಸಂಪೂರ್ಣ ಸುರಕ್ಷಿತ, ಆತಂಕ ಬೇಡ ; ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್-ಕಹಳೆ ನ್ಯೂಸ್

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರು ದೇಶದಲ್ಲಿ ಕೊರೋನಾ ನಿಯಂತ್ರಿಸುವ ದೃಷ್ಟಿಯಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ವಿತರಣೆ ಕೈಗೊಳ್ಳಲಾಗಿದ್ದು, ಈ ಎರಡೂ ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿದೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಅವರು ಲಸಿಕೆಯ ಬಗ್ಗೆ ಸಾರ್ವಜನಿಕರು ಆತಂಕಪಡುವ ಅವಶ್ಯಕತೆ ಇಲ್ಲ. ಸಾರ್ವಜನಿಕರು ಸುಳ್ಳು ವದಂತಿಗಳಿಗೆ ಕಿವಿಗೊಡದೆ, ಕೇವಲ ಸರ್ಕಾರದ ಅಧಿಕೃತ ಮಾಹಿತಿಯನ್ನು ಮಾತ್ರ ಪರಿಗಣಿಸಬೇಕೆಂದು ಟ್ವೀಟ್ ಮಾಡಿದ್ದಾರೆ. ಹಾಗೂ ರಾಜ್ಯದಲ್ಲಿ ಲಸಿಕೆ ಪಡೆದ ಕೆಲವರಲ್ಲಿ ಸೋಂಕು ಕಾಣಿಸಿಕೊಂಡಿರುವ ಸಂಗತಿ ಬೆಳಕಿಗೆ ಬಂದಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಈ ಲಸಿಕೆ ಸುರಕ್ಷತೆ ಮತ್ತು ದಕ್ಷತೆ ಬಗ್ಗೆ ಮತ್ತೊಮ್ಮೆ ಆರೋಗ್ಯ ಸಚಿವ ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು