Recent Posts

Monday, January 20, 2025
ಹೆಚ್ಚಿನ ಸುದ್ದಿ

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ಮಂಡಿ ವ್ಯವಸ್ಥೆಯ ಅಧಿಕಾರವನ್ನು ದುರ್ಬಲಗೊಳಿಸಲಿವೆ ; ಕೇಂದ್ರ ಸಚಿವ ಶರದ್ ಪವಾರ್-ಕಹಳೆ ನ್ಯೂಸ್

ಮುಂಬೈ : ಕೇಂದ್ರ ಸಚಿವ ಎನ್‍ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ಮಂಡಿ ವ್ಯವಸ್ಥೆಯ ಅಧಿಕಾರವನ್ನು ದುರ್ಬಲಗೊಳಿಸಲಿವೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೂ ಅವರು ಕೇಂದ್ರದ ಹೊಸ ಕೃಷಿ ಕಾಯ್ದೆಗಳು ಕನಿಷ್ಠ ಬೆಂಬಲ ಬೆಲೆ ಸಂಗ್ರಹಣೆಯ ಮೇಲೆ ಪ್ರತಿಕೂಲವಾದ ಪರಿಣಾಮ ಬೀರಲಿದೆ. ಅಲ್ಲದೇ ಮಂಡಿ ವ್ಯವಸ್ಥೆಯ ಅಧಿಕಾರವನ್ನು ದುರ್ಬಲಗೊಳಿಸಲಿವೆ ಎಂದು ಟ್ವೀಟ್ ಮಾಡಿದ್ದಾರೆ. ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸುತ್ತಿರುವ ರೈತರು, ದೆಹಲಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆಯನ್ನು ಮುಂದುವರಿಸಿದ್ದು, ಈ ವೇಳೆ ಎಂಎಸ್‍ಪಿ ಯಾಂತ್ರಿಕ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಮತ್ತಷ್ಟು ಬಲಪಡಿಸಬೇಕು ಎಂದು ಹೇಳಿದರು. ಹಾಗೆ ನೂತನ ಕೃಷಿ ಕಾಯ್ದೆ ಖಾಸಗಿ ವ್ಯಾಪಾರಿಗಳಿಂದ ವಸೂಲಿ ಸೇರಿದಂತೆ ಶುಲ್ಕ ಸಂಗ್ರಹಣೆ, ವಿವಾದ ಪರಿಹಾರ, ಕೃಷಿ ವ್ಯಾಪಾರ ಪರವಾನಗಿ ಹಾಗೂ ಇ-ವಹಿವಾಟಿನ ನಿಯಮಗಳಿಗೆ ಸಂಬಂಧಿಸಿದಂತೆ ಸಂಪೂರ್ಣವಾಗಿ ಮಂಡಿಯನ್ನು ದುರ್ಬಲಗೊಳಿಸುತ್ತದೆ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು