Wednesday, April 2, 2025
ಬೆಂಗಳೂರು

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿದ್ದವರ ಮೇಲೆ ಹಲ್ಲೆ ; ಆರೋಪಿಗಳ ಬಂಧನ-ಕಹಳೆ ನ್ಯೂಸ್

ಬೆಂಗಳೂರು : ನಗರದ ಬಿಸ್ಮಿಲ್ಲಾನಗರದಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ದೇಣಿಗೆ ಸಂಗ್ರಹಿಸುತ್ತಿದ್ದ ಗುಂಪಿನ ಮೇಲೆ ದುಷರ್ಮಿಗಳ ತಂಡವೊಂದು ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿಯನ್ನು ಬಂಧಿಸಲಾಗಿದ್ದು, ಬಂಧಿತರನ್ನು ಅಡ್ನಾನ್, ಅಹ್ಮದ್ ಪಾಷಾ, ಅಬ್ದುಲ್ ಗೌಸ್, ಮೊಹಮ್ಮದ್, ಶಬೀರ್, ಸೈಯದ್ ಸುಹೇಲ್, ಹಾಗೂ ಸೈಯದ್ ಅಕ್ಮಲ್ ಎಂದು ಗುರುತಿಸಲಾಗಿದೆ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕಾಗಿ ಶೇಷಾಚಲ, ಯಶವಂತ್, ಸುರೇಶ್ ಎಂಬುವವರು ನಿಧಿ ಸಂಗ್ರಹ ಮಾಡುತ್ತಿದ್ದ ಸಂದರ್ಭದಲ್ಲಿ ಆರೋಪಿಗಳು ಹಲ್ಲೆ ನಡೆಸಿ, ನಿಧಿ ಸಂಗ್ರಹಕ್ಕಾಗಿ ತಂದಿದ್ದ ವಾಹನದ ಮೇಲೂ ದಾಳಿ ಮಾಡಿದ್ದು, ವಾಹನ ಜಖಂಗೊಳಿಸಿದ್ದಾರೆ ಎಂದು ದೂರಲಾಗಿದೆ. ನಿಮಗಿಲ್ಲಿ ಬರಲು ಅವಕಾಶ ನೀಡಿದವರು ಯಾರು ಎಂದು ಕೇಳಿದ ಗುಂಪು ಕಲ್ಲು ತೂರಾಟ ನಡೆಸಿದೆ ಎಂದು ಆರೋಪಿಸಲಾಗಿದೆ. ಕೂಡಲೇ ಸ್ಥಳಕ್ಕೆ ಸುದ್ದಗುಂಟೆ ಠಾಣೆಗೆ ಆಗಮಿಸಿದ ಡಿಸಿಪಿ ಶ್ರೀನಾಥ್ ಆಗಮಿಸಿ ಘಟನೆ ನಡೆದ ಸ್ಥಳದ ಸಿಸಿಟಿವಿ ವಿಡಿಯೋ ತುಣುಕಗಳನ್ನು ಪರಿಶೀಲಿಸಿ ಕಾರ್ಯಾಚರಣೆ ನಡೆಸಿದ್ದು ಆರೋಪಿಗಳನ್ನು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ