Friday, January 24, 2025
ಹೆಚ್ಚಿನ ಸುದ್ದಿ

ಕೋಳಿ ಅಂಕಕ್ಕೆ ಪೊಲೀಸ್ ದಾಳಿ ನಡೆಸಿ ವಶಕ್ಕೆ ಪಡೆದ 4 ದ್ವಿಚಕ್ರ ವಾಹನಗಳು ಬೆಂಕಿಗಾಹುತಿ-ಕಹಳೆ ನ್ಯೂಸ್

ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಬಳಿ ಕೋಳಿ ಅಂಕದ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದ ದ್ವಿಚಕ್ರ ವಾಹನಗಳನ್ನು ಸಾಗಾಟ ಮಾಡುವಾಗ ಬೈಕ್‍ಗಳು ದಾರಿ ಮಧ್ಯೆಯೇ ಸುಟ್ಟು ಭಸ್ಮವಾದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೋಣಂದೂರಿನ ಕಾಡು ಮಾರ್ಗಗಳಲ್ಲಿ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದವರೆಲ್ಲಾ ವಾಹನಗಳನ್ನು ಬಿಟ್ಟು ಪರಾರಿಯಾಗಿದ್ದರು. ಘಟನಾ ಸ್ಥಳದಲ್ಲಿದ್ದ ದ್ವಿಚಕ್ರ ವಾಹನಗಳನ್ನು ವಶಪಡಿಸಿದ ಪೊಲೀಸರು, ಬೈಕ್‍ಗಳನ್ನು ಠಾಣೆಗೆ ತಂದರೆ ಆರೋಪಿಗಳು ಅವರಾಗಿಯೇ ಬರುತ್ತಾರೆ ಎಂದುಕೊಂಡು ಬೈಕ್‍ಗಳನ್ನ ಟಾಟಾ ಏಸ್ ವಾಹನದಲ್ಲಿ ತೀರ್ಥಹಳ್ಳಿ ಪಟ್ಟಣಕ್ಕೆ ಸಾಗಿಸುತ್ತಿದ್ದರು. ಈ ವೇಳೆಯಲ್ಲಿ ದಾರಿ ಮಧ್ಯೆ ವಾಹನದಿಂದ ಬೈಕ್ ಗಳು ಜಾರಿ ಕೆಳಗೆ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ನಾಲ್ಕೈದು ಬೈಕ್ ಒಮ್ಮೆಲೆ ಬಿದ್ದಿದ್ದರಿಂದ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ. ಹೀಗಾಗಿ ನಾಲ್ಕೂ ಬೈಕ್ ಗಳು ಸುಟ್ಟು ಕರಕಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು