Recent Posts

Monday, January 20, 2025
ಹೆಚ್ಚಿನ ಸುದ್ದಿ

ಕಲಡ್ಕ ಶ್ರೀ ರಾಮ ಪ್ರೌಢಶಾಲೆ ಕೇಂದ್ರಲ್ಲಿ 2020-21ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾನ್ವೇಷಣಾ ಪರೀಕ್ಷೆ-ಕಹಳೆ ನ್ಯೂಸ್

ಕಲ್ಲಡ್ಕ : 2020-21ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾನ್ವೇಷಣಾ ಪರೀಕ್ಷೆ (NMMS) ದಿನಾಂಕ 25.01.2021 ರಂದು ಕಲಡ್ಕ ಶ್ರೀ ರಾಮ ಪ್ರೌಢಶಾಲೆ ಕೇಂದ್ರಲ್ಲಿ ಜರಗಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳ ತಾಲೂಕಿನ ವಿವಿಧ ಶಾಲೆಗಳ 8ನೇ ತರಗತಿಯಲ್ಲಿ ಕಲಿಯುತ್ತಿರುವ 215 ವಿದ್ಯಾರ್ಥಿಗಳು ಈ ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ಸಾಮಾನ್ಯ ಬೌದ್ಧಿಕ್ ಪರೀಕ್ಷೆ (GMAT) ಮತ್ತು ವ್ಯಾಸಂಗ ಪ್ರವೃತ್ತಿ ಪರೀಕ್ಷೆ (SAT) 90ನಿಮಿಷ ಅವಧಿಯ 90 ಅಂಕಗಳ 90 ಬಹು ಆಯ್ಕೆ ಪ್ರಶ್ನೆಗಳನ್ನು ನೀಡಲಾಗಿತ್ತು. ಎರಡು ಪ್ರಶ್ನೆ ಪತ್ರಿಕೆಗಳನ್ನು ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದಲ್ಲಿ ಒದಗಿಸಲಾಗಿದ್ದು, ವಿದ್ಯಾರ್ಥಿಗಳು ಒ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಗುರುತು ಮಾಡಿ ಉತ್ತರಿಸಿದರು. ಪ್ರೌಢಶಾಲೆಯ ಅಯೋಧ್ಯಾ ಕಟ್ಟಡದಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿಲಾಗಿದ್ದು ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿದರು. ಎಲ್ಲಾ ವಿದ್ಯಾರ್ಥಿಗಳ ಉಷ್ಣತೆ ಪರೀಕ್ಷೆ ಮಾಡಿ ಸ್ಯಾನಿಟೈಸರ್ ಹಾಕಿಕೊಳ್ಳುವಂತೆ ಸೂಚಿಸಲಾಯಿತು. ಮತ್ತು ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಪರೀಕ್ಷೆಯ ಕೊಠಡಿಗೆ ಪ್ರವೇಶಿಸಿದರು. ಪೋಷಕರು ತಮ್ಮ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಉತ್ಸಾಹದಿಂದ ಕರೆತಂದಿದ್ದು, ಪರೀಕ್ಷಾ ಮುಖ್ಯಸ್ಥರಾಗಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ವಸಂತಿಕುಮಾರಿ ಕಾರ್ಯ ನಿರ್ವಹಿಸಿದರು.