Wednesday, April 2, 2025
ಕಡಬ

ಕಡಬದ ಕೈಕಂಬದಲ್ಲಿ ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ ಶೌಚಾಲಯದಲ್ಲಿ ಬಂಧಿ-ಕಹಳೆ ನ್ಯೂಸ್

ಕಡಬ : ಕಡಬದ ಕೈಕಂಬದಲ್ಲಿ ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆಯೊಂದು ಸಾಕು ನಾಯಿಯ ಜೊತೆ ಮನೆಯ ಶೌಚಾಲಯದಲ್ಲಿ ಬಂಧಿಯಾದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆ ಸುಬ್ರಹ್ಮಣ್ಯ ಸಮೀಪದ ಕೈಕಂಬ ನಿವಾಸಿ ರೇಗಪ್ಪ ಎಂಬವರ ಮನೆಯ ಸಮೀಪ ಸಾಕು ನಾಯಿಯನ್ನು ಚಿರತೆಯೊಂದು ಅಟ್ಟಿಸಿಕೊಂಡು ಬಂದಿದ್ದು, ಸಾಕುನಾಯಿಯು ಚಿರತೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಮನೆಯ ಹೊರಗಿದ್ದ ಶೌಚಾಲಯವನ್ನು ಹೊಕ್ಕಿದ್ದು, ಚಿರತೆಯು ನಾಯಿಯನ್ನು ಹಿಂಬಾಲಿಸಿ ಶೌಚಾಲಯದ ಒಳಗೆ ಬಂದಿದೆ. ಇದನ್ನು ಗಮನಿಸಿದ ಮನೆಯವರು ಹೊರಗಿನಿಂದ ಶೌಚಾಲಯದ ಬಾಗಿಲನ್ನು ಹಾಕಿದ್ದು, ಇದೀಗ ನಾಯಿ ಹಾಗೂ ಚಿರತೆ ಎರಡೂ ಕೂಡ ಶೌಚಾಲಯದ ಒಳಗೆ ಬಂಧಿಯಾಗಿದೆ. ಈ ಕುರಿತು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಇನ್ನಷ್ಟೇ ಕಾರ್ಯಾಚರಣೆ ನಡೆಯಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ