Recent Posts

Monday, January 20, 2025
ಬೆಂಗಳೂರು

ಬೆಂಗಳೂರಿನ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ಹಣ ತುಂಬಿಸುವ ವಾಹನ ಚಾಲಕ 65 ಲಕ್ಷ ರೂ. ಸಮೇತ ಪರಾರಿ-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಸುಬ್ರಹ್ಮಣ್ಯ ನಗರದಲ್ಲಿ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ಹಣ ತುಂಬಿಸುವ ವಾಹನ ಚಾಲಕ 65 ಲಕ್ಷ ರೂ. ಸಮೇತ ಪರಾರಿಯಾಗಿರುವ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಧಿಕಾರಿಗಳು ಹಾಗೂ ಗನ್ ಮ್ಯಾನ್ ಸುಬ್ರಹ್ಮಣ್ಯ ನಗರದಲ್ಲಿ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ಹಣ ತುಂಬಲು ಎಟಿಎಂ ಒಳಗೆ ಹೋಗಿದ್ದ ವೇಳೆಯಲ್ಲಿ ವಾಹನದಲ್ಲಿದ್ದ ಚಾಲಕ 65 ಲಕ್ಷ ಹಣದ ಬ್ಯಾಗ್ ಸಮೇತ ಪರಾರಿಯಾಗಿದ್ದಾನೆ. ತಕ್ಷಣವೇ ಅಧಿಕಾರಿಗಳು ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದು, ಡ್ರೈವರ್ ಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು