Recent Posts

Monday, January 20, 2025
ಕಡಬ

ಕಡಬದಲ್ಲಿ ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದು ಮನೆಯ ಶೌಚಾಲಯದಲ್ಲಿ ಬಂಧಿಯಾಗಿದ್ದ ಚಿರತೆಯೂ ಕಾರ್ಯಾಚರಣೆ ವೇಳೆ ಪರಾರಿ-ಕಹಳೆ ನ್ಯೂಸ್

ಕಡಬ : ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದು ಮನೆಯ ಶೌಚಾಲಯದಲ್ಲಿ ಬಂಧಿಯಾಗಿದ್ದ ಚಿರತೆಯೂ ಕಾರ್ಯಾಚರಣೆ ವೇಳೆ ಪರಾರಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಬ್ರಮಣ್ಯ ಸಮೀಪದ ಕೈಕಂಬ ನಿವಾಸಿ ರೇಗಪ್ಪ ಅವರ ಮನೆಯ ಸಮೀಪ ಸಾಕು ನಾಯಿಯನ್ನು ಚಿರತೆಯೊಂದು ಅಟ್ಟಿಸಿಕೊಂಡು ಬಂದಿದ್ದು, ಚಿರತೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಸಾಕುನಾಯಿಯು ಮನೆಯ ಹೊರಗಿದ್ದ ಶೌಚಾಲಯಕ್ಕೆ ಹೊಕ್ಕಿದ್ದರಿಂದ ನಾಯಿಯನ್ನು ಹಿಂಬಾಲಿಸಿದ ಚಿರತೆಯು ಶೌಚಾಲಯದ ಒಳಗೆ ಬಂದಿತ್ತು. ಇದನ್ನು ಗಮನಿಸಿದ ಮನೆಯವರು ಹೊರಗಿನಿಂದ ಶೌಚಾಲಯದ ಬಾಗಿಲನ್ನು ಹಾಕಿದ್ದರು. ಈ ವೇಳೆ ನಾಯಿ ಹಾಗೂ ಚಿರತೆ ಎರಡೂ ಶೌಚಾಲಯದ ಒಳಗೆ ಬಂಧಿಯಾಗಿದ್ದವು. ಅರಣ್ಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಚಿರತೆಯನ್ನು ಹಿಡಿಯುವ ಕಾರ್ಯಾಚರಣೆಯಲ್ಲಿ ಚಿರತೆಯು ತಪ್ಪಿಸಿಕೊಂಡು ಕಾಡಿನತ್ತ ಓಡಿ ತಪ್ಪಿಸಿಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು