Monday, January 20, 2025
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ಹೆತ್ತ ತಾಯಿಯನ್ನು ಬೀದಿಯಲ್ಲಿ ಬಿಟ್ಟ ಪಾಪಿ ಮಕ್ಕಳು-ಕಹಳೆ ನ್ಯೂಸ್

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ಪಾಪಿ ಮಕ್ಕಳು ಹೆತ್ತ ತಾಯಿಯನ್ನು ಬೀದಿಯಲ್ಲಿ ಬಿಟ್ಟ ಅಮಾನವೀಯ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಲತಃ ಕಳಿಯ ಗ್ರಾಮದ ಜನತಾ ಕಾಲೋನಿ ನಿವಾಸಿಯಾದ ವೃದ್ಧೆಯೊಬ್ಬರಿಗೆ ಐವರು ಮಕ್ಕಳಿದ್ದರೂ ಅನಾಥ ಪರಿಸ್ಥಿತಿ ಎದುರಾಗಿದ್ದು, ಅವರಿಗೆ ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರಿದ್ದು, ಎಲ್ಲರಿಗೂ ವಿವಾಹವಾಗಿದೆ. ಈ ವೃದ್ಧೆ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಆರೈಕೆ ಮಾಡುವವರು ಯಾರು ಎಂಬ ವಿಚಾರಕ್ಕೆ ಮಕ್ಕಳು ಕಿತ್ತಾಡಿಕೊಂಡಿದ್ದರು. ಕೊನೆಗೆ ತಾಯಿಯನ್ನು ಮಕ್ಕಳು ನ್ಯಾಯತರ್ಪು ಗ್ರಾಮದ ನಾಳದಲ್ಲಿ ರಸ್ತೆ ಬದಿಯಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಸ್ಥಳೀಯರೊಬ್ಬರು ದಕ್ಷಿಣ ಕನ್ನಡ ಜಿಲ್ಲಾ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕೆ ತುರ್ತು ಸ್ವಂದನಾ ವಾಹನ ದೌಡಾಯಿಸಿ ವೃದ್ಧೆಯನ್ನು ಅವರ ಪುತ್ರಿಯ ಮನೆ ಕರೆದುಕೊಂಡು ಹೋಗಿ, ಅಲ್ಲಿ ಸೂಕ್ತ ಮಾಹಿತಿ ನೀಡಿದ್ದಾರೆ. ಅಮಾನವೀಯವಾಗಿ ನಡೆದುಕೊಂಡ ಮಕ್ಕಳ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು