Recent Posts

Monday, January 20, 2025
ಬಂಟ್ವಾಳ

ಕಲ್ಲಡ್ಕದ ಪೂರ್ಲಿಪ್ಪಾಡಿಯಲ್ಲಿ ನಿನ್ನೆ ಖಾಲಿ ಗ್ಯಾಸ್ ಟ್ಯಾಂಕರ್ ಮತ್ತು ಕಂಟೈನರ್ ನಡುವೆ ಅಪಘಾತ-ಕಹಳೆ ನ್ಯೂಸ್

ಬಂಟ್ವಾಳ : ಸೂರಿಕುಮೇರುವಿನಲ್ಲಿ ಮಂಗಳವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಸುಮಾರು 10 ಗಂಟೆ ವಾಹನ ಸಂಚಾರ ಅಡಚಣೆಯ ಸಮಸ್ಯೆಯ ಬೆನ್ನಲ್ಲೇ ಕಲ್ಲಡ್ಕದಲ್ಲಿ ನಿನ್ನೆ ರಾತ್ರಿ ಮತ್ತೊಂದು ಅಪಘಾತ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಿನ್ನೆ ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಖಾಲಿಯಾಗಿರುವ ಅನಿಲ ಟ್ಯಾಂಕರ್ ಹಾಗೂ ಬೆಂಗಳೂರು ಕಡೆ ಹೋಗುತ್ತಿದ್ದ ಕಂಟೈನರ್ ನಡುವೆ ಅಪಘಾತ ಸಂಭವಿಸಿದ್ದು, ಇದರ ಪರಿಣಾಮ ಕೆಲ ಕಾಲ ನಿನ್ನೆ ರಾತ್ರಿ ಆತಂಕದ ವಾತಾವರಣ ನಿರ್ಮಾಣ ಉಂಟಾಗಿತ್ತು. ಆದರೆ ಗ್ಯಾಸ್ ಟ್ಯಾಂಕರ್ ಖಾಲಿ ಇದ್ದ ಕಾರಣ ಯಾವುದೇ ಅಪಾಯ ಎದುರಾಗಿಲ್ಲ. ಈ ಘಟನೆ ಕಲ್ಲಡ್ಕದ ಪೂರ್ಲಿಪ್ಪಾಡಿಯಲ್ಲಿ ನಿನ್ನೆ ರಾತ್ರಿ ಸುಮಾರು 9 ಗಂಟೆ ವೇಳೆಗೆ ನಡೆದಿದೆ ಎನ್ನಲಾಗಿದೆ. ಇದರಿಂದಾಗಿ ಯಾರಿಗೂ ಗಾಯಗಳುಂಟಾಗಿಲ್ಲ ಮತ್ತು ವಾಹನ ಸಂಚಾರಕ್ಕೆ ಅಡಚಣೆ ಆಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣಾ ಎಸ್.ಐ. ರಾಜೇಶ್ ಕೆ.ವಿ. ಹಾಗೂ ಸಿಬ್ಬಂದಿ ಆಗಮಿಸಿ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು. ಹಾಗೆಯೇ ನಿನ್ನೆ ಸಂಜೆಯಷ್ಟೇ ಗ್ಯಾಸ್ ಟ್ಯಾಂಕರ್ ವಾಹನ ಚಾಲಕರ ಸುರಕ್ಷಿತ ಚಾಲನೆ ಕುರಿತು ಕಟ್ಟುನಿಟ್ಟಿನ ಕ್ರಮ ಮತ್ತು ರಾತ್ರಿ ಸಂಚಾರದ ನಿರ್ಬಂಧಗಳ ಕುರಿತು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಚರ್ಚಿಸಿದ್ದರು.