Friday, January 24, 2025
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ‘ಯೂನಿಯನ್ ಬಜೆಟ್2021’ ಕುರಿತಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ಈ ಬಾರಿಯ ಯೂನಿಯನ್ ಬಜೆಟ್‍ನಲ್ಲಿ, ಸಂಪನ್ಮೂಲಗಳ ಕ್ರೂಢೀಕರಣ, ಉತ್ಪಾದನೆಗೆ ಪ್ರೋತ್ಸಾಹ,, ಬಂಡವಾಳದ ಅಭಿವೃದ್ಧಿಗೆ ಒತ್ತು ನೀಡಿ ಖಾಸಗಿ ಹೂಡಿಕೆಗೆ ಅವಕಾಶ ನೀಡಲಾಗಿದ್ದು ಒಂದು ದೀರ್ಘಕಾಲಿಕ ಪರಿಣಾಮ ನೀಡಬಹುದಾದ ಕೇಂದ್ರೀಯ ಬಜೆಟ್ ಮತ್ತು ಭಾರತದ ಸಮಗ್ರ ಬದಲಾವಣೆಗೆ ಪೂರಕವಾದ ಬಜೆಟ್ ಇದಾಗಿದೆ ಎಂದು ಇಲ್ಲಿನ ವಿವೇಕಾನಂದ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಕಾಲೇಜಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಭಾಗ , ಮ್ಯಾನೇಜ್ ಮೆಂಟ್ ಅಸೋಸಿಯೇಶನ್ ಹಾಗೂ ಐಕ್ಯೂಎಸಿ ಇದರ ಸಂಯುಕ್ತ ಆಶ್ರಯದಲ್ಲಿ ‘ಯೂನಿಯನ್ ಬಜೆಟ್ 2021 – ಕೀ ಹೈಲೈಟ್ಸ್ ಅಂಡ್ ಅನಾಲಿಸಿಸ್’ ಎಂಬ ವಿಷಯದ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಗುರುವಾರ ಮಾತನಾಡಿದರು. ಈ ಸಂದರ್ಭದಲ್ಲಿ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಭಾಗದ ಮುಖ್ಯಸ್ಥೆ ರೇಖಾ ಪಿ. ಸ್ವಾಗತಿಸಿ, ತೃತೀಯ ಬಿಬಿಎ ವಿದ್ಯಾರ್ಥಿ ಶಿಕ್ಷಿತ್ ವಂದಿಸಿದರು. ವಿದ್ಯಾರ್ಥಿ ಭವನ್ ನಾಣಯ್ಯ ಕಾರ್ಯಕ್ರಮ ನಿರೂಪಿಸಿದರು.