Monday, January 20, 2025
ಹೆಚ್ಚಿನ ಸುದ್ದಿ

ಯಾರಾದರೂ ಕೋಟಿ ಕೊಟ್ರೆ ಮೋದಿಯ ಕೊಲೆ ಮಾಡ್ತೀನಿ ಎಂದವ ಅರೆಸ್ಟ್-ಕಹಳೆ ನ್ಯೂಸ್

ಚೆನ್ನೈ : ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲೆ ಮಾಡುವುದಾಗಿ ಪೋಸ್ಟ್ ಹಾಕಿಕೊಂಡಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಯನ್ನು 43 ವರ್ಷದ ಸತ್ಯ ಆನಂದಂ ಎಂದು ಗುರುತಿಸಲಾಗಿದೆ. ಈತ ಆರ್ಯಂಕುಪ್ಪಂ ಗ್ರಾಮದ ನಿವಾಸಿ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಎಂದು ಪೊಲೀಸರು ತಿಳಿಸಿದ್ದಾರೆ. ಪುದುಚೇರಿಯ ಆರ್ಯಂಕುಪ್ಪಂ ಗ್ರಾಮದ ನಿವಾಸಿಯಾಗಿದ್ದ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ , ಯಾರಾದರೂ 5 ಕೋಟಿ ರೂ ಕೊಟ್ಟರೆ ಮೋದಿಯ ಕೊಲೆ ಮಾಡುವುದಾಗಿ ಘೋಷಣೆ ಮಾಡಿದ್ದ, ಈ ಪೋಸ್ಟ್ ನೋಡಿ ಕಾರು ಚಾಲಕನೋರ್ವ ಪೊಲೀಸರಿಗೆ ಮಾಹಿತಿ ನೀಡಿದ್ದು, ಇತ್ತ ಸೋಶಿಯಲ್ ಮೀಡಿಯಾದಲ್ಲಿ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಅಲ್ಲದೇ ಖಾತೆಯ ಮೂಲ ಪರಿಶೀಲಿಸಿ ಆತನ ಜಾಡು ಪತ್ತೆ ಮಾಡಿ ಬಂಧಿಸಿದ್ದಾರೆ. ಸದ್ಯ ಸತ್ಯ ಆನಂದಂ ವಿರುದ್ದ ಪೊಲೀಸರು ಐಪಿಸಿ ಸೆಕ್ಷನ್ 505 (1) ಹಾಗೂ 505 (2) ಇದರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು