ಬಳ್ಳಾರಿ ತಾಲೂಕಿನಲ್ಲಿ ಲಾರಿ ಮತ್ತು ಬೊಲೆರೋ ನಡುವೆ ಅಪಘಾತ; ಶಿಕ್ಷಣಾಧಿಕಾರಿ ಸೇರಿದಂತೆ ನಾಲ್ವರು ಗಾಯ-ಕಹಳೆ ನ್ಯೂಸ್
ಬಳ್ಳಾರಿ : ಬಳ್ಳಾರಿ ತಾಲೂಕಿನ ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯ 50 ರ ಟನಲ್ ಬಳಿಯಲ್ಲಿ ಲಾರಿ ಮತ್ತು ಬೊಲೆರೋ ನಡುವೆ ನಡೆದ ಅಪಘಾತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.
ಈ ಅಪಘಾತದಿಂದ ಹೊಸಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಾ ಎಂಬವರು ಪ್ರಾಣಾಪಾಯದಿಂದ ಪಾರಾದವರು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಚಲಿಸುತ್ತಿದ್ದ ಬೊಲೆರೋ ವಾಹನ ರಾಷ್ಟ್ರೀಯ ಹೆದ್ದಾರಿಯ ಟನಲ್ ಬಳಿಗೆ ಬರುತ್ತಿದ್ದಂತೆಯೇ ಲಾರಿಗೆ ಢಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಬೊಲೆರೋ ವಾಹನ ಪಲ್ಟಿಯಾಗಿದೆ. ವಾಹನದಲ್ಲಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹೊಸಪೇಟೆಯ ಸರಕಾರಿ ಆಸ್ವತ್ರೆಗೆ ದಾಖಲು ಮಾಡಲಾಗಿದ್ದು, ಅಪಘಾತದ ಕುರಿತು ಹೊಸಪೇಟೆ ಸಂಚಾರಿ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಪರಾರಿಯಾಗಿರುವ ಲಾರಿ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.