Recent Posts

Sunday, January 19, 2025
ಹೆಚ್ಚಿನ ಸುದ್ದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣೆ, ಧರ್ಮಸ್ಥಳದಿಂದ 25 ರೂ.ಲಕ್ಷ ನಿಧಿ ಟ್ರಸ್ಟ್‍ಗೆ ಹಸ್ತಾಂತರ-ಕಹಳೆ ನ್ಯೂಸ್

ಧರ್ಮಸ್ಥಳ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀರಾಮ ಮಂದಿರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಲಕ್ಷ ನಿಧಿಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ಗೆ ಹಸ್ತಾಂತರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿಶ್ವ ಹಿಂದು ಪರಿಷತ್‍ನ ಪದಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಿದ್ದು, ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರದಿಂದ ಘೋಷಿಸಿದ್ದ 25 ಲಕ್ಷ ರೂ. ನಿಧಿ ಸಮರ್ಪಣೆಯ ಡಿಡಿಯನ್ನು ವಿಶ್ವ ಹಿಂದು ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ರಾಘವನ್ ಅವರಿಗೆ ಹಸ್ತಾಂತರಿಸಿದ್ದಾರೆ.

ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಅಧ್ಯಕ್ಷ ಎಂ.ಬಿ. ಪುರಾಣಿಕ್, ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ, ಮಂಗಳೂರು ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ಪುತ್ತೂರು ಜಿಲ್ಲಾ ಕಾರ್ಯಾಧ್ಯಕ್ಷ ಭಾಸ್ಕರ್ ಧರ್ಮಸ್ಥಳ, ಮೊದಲಾದವರು ಉಪಸ್ಥಿತರಿದ್ದರು.