ಬಿಲ್ಲವರನ್ನು ನಿಂದಿಸಿದ ಬಿಜೆಪಿ ನಾಯಕ ಜಗದೀಶ್ ಅಧಿಕಾರಿಗೆ ಮಸಿ ಬಳಿದರೆ 1 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ; ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ-ಕಹಳೆ ನ್ಯೂಸ್
ಮಂಗಳೂರು : ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಅವರ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಜನಾರ್ದನ ಪೂಜಾರಿ ಮತ್ತು ಬಿಲ್ಲವರ ಆರಾಧ್ಯ ದೈವ ಕೋಟಿ ಚೆನ್ನಯ್ಯರ ವಿರುದ್ಧ ಜಗದೀಶ್ ಅಧಿಕಾರಿ ವಿವಾದಾತ್ಮಕವಾದ ಹೇಳಿಕೆಯನ್ನು ನೀಡಿದ್ದು, ಇದು ಬಿಲ್ಲವರು ಕಣ್ಣು ಕೆಂಪಾಗಿಸಿದೆ. ಈ ಬಗ್ಗೆ ಮಾತನಾಡಿದ ಪ್ರತಿಭಾ ಕುಳಾಯಿ, ಜನಾರ್ದನ ಪೂಜಾರಿ ಕಾಲಿಗೆ ಬಿದ್ದು ಜಗದೀಶ್ ಕ್ಷಮೆ ಕೇಳಬೇಕು. ಬಿಲ್ಲವರ ಆರಾಧ್ಯ ದೈವ ಕೋಟಿ ಚೆನ್ನಯ್ಯರ ವಿರುದ್ಧ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಹಾಗೂ ವಾಲ್ಪಾಡಿ ಗುತ್ತುವಿನಲ್ಲಿ ನೇಮೋತ್ಸವದ ಧಾರ್ಮಿಕ ಸಭೆ ವೇಳೆ ಮಾತನಾಡಿದ ಜಗದೀಶ್ ಅವರು ಪಟ್ಟ ಆದವರ ಕಾಲು ಹಿಡಿಯುತ್ತೇನೆ, ಜನಾರ್ದನ ಪೂಜಾರಿ ಅವರ ಕಾಲು ಹಿಡಿಯುವುದಿಲ್ಲ ಎಂಬ ಹೇಳಿಕೆ ನೀಡಿದ್ದರು. ಈ ರೀತಿ ಏಕೆ ಹೇಳಿದಿರಿ ಎಂದು ಕೇಳಲು ಬಿಲ್ಲವ ಸಮುದಾಯದ ಮುಖಂಡರೊಬ್ಬರು ಜಗದೀಶ್ ಅವರಿಗೆ ಕರೆ ಮಾಡಿದ್ದರು. ಈ ವೇಳೆ ಜಗದೀಶ್ ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ಆಡಿಯೋ ವೈರಲ್ ಆಗಿದ್ದು, ಬಿಲ್ಲವರನ್ನು ಕೆರಳಿಸಿತ್ತು.