Thursday, January 23, 2025
ಪುತ್ತೂರು

ಮಂಗಳೂರಿನ ಕೆಎಂಸಿ ಆಸ್ವತ್ರೆಯ ತುರ್ತುನಿಗಾ ವಿಭಾಗದೊಂದಿಗೆ ಪುತ್ತೂರಿನ ಬೊಳುವಾರಿನಲ್ಲಿರುವ ಪ್ರಗತಿ ಸ್ಪೆಷಾಲಿಟಿ ಆಸ್ವತ್ರೆಯಲ್ಲಿ ನಾಳೆ ಎಮರ್ಜೆನ್ಸಿ ಮೆಡಿಸಿನ್ ವಿಭಾಗ ಕಾರ್ಯಾರಂಭ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಬೊಳುವಾರಿನಲ್ಲಿರುವ ಪ್ರಗತಿ ಸ್ಪೆಷಾಲಿಟಿ ಆಸ್ವತ್ರೆ ಹಾಗೂ ಮಂಗಳೂರಿನ ಕೆಎಂಸಿ ಆಸ್ವತ್ರೆಯ ತುರ್ತುನಿಗಾ ವಿಭಾಗದೊಂದಿಗೆ ಮಾಡಿಕೊಂಡಿರುವ ಒಪ್ಪಂದದಂತೆ ಸರ್ವ ಸುಸಜ್ಜಿತ ಪ್ರಗತಿ ತುರ್ತುನಿಗಾ ವೈದ್ಯಕೀಯ ಸೇವೆಗಳು ನಾಳೆ 10.30 ರಿಂದ ಪ್ರಗತಿ ಸ್ಪೆಷಾಲಿಟಿ ಆಸ್ವತ್ರೆಯಲ್ಲಿ ಕಾರ್ಯಾರಂಭಗೊಳ್ಳಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಹಾಗೆಯೇ ಅತಿಥಿಗಳಾಗಿ ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಸುದ್ಧಿ ಬಿಡುಗಡೆ ಪತ್ರಿಕೆಯ ಪ್ರಧಾನ ಸಂಪಾದಕರು ಹಾಗೂ ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರೂ ಆಗಿರುವ ಡಾ. ಯು.ಪಿ.ಶಿವಾನಂದ, ಮತ್ತು ರೋಟರಿ ಜಿಲ್ಲಾ ಗವರ್ನರ್ ಎಂ. ರಂಗನಾಥ್ ಭಟ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು