Wednesday, January 22, 2025
ಉಡುಪಿ

ಮದುವೆಯಾಗುವುದಾಗಿ ನಂಬಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ; ಆರೋಪಿಯ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು-ಕಹಳೆ ನ್ಯೂಸ್

ಉಡುಪಿ : ಮದುವೆಯಾಗುವುದಾಗಿ ನಂಬಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಾಲಕಿಗೆ 17 ವರ್ಷ 9ತಿಂಗಳು ವಯಸ್ಸಾಗಿದ್ದು, ಈ ಕಾರಣದಿಂದ 27 ವರ್ಷ ವಯಸ್ಸಿನ ಆರೋಪಿಯ ವಿರುದ್ಧ ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಲಾಗಿದ್ದು, ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಉಡುಪಿಯ ಮಕ್ಕಳ ಸಹಾಯವಾಣಿಗೆ ಬಂದ ದೂರಿನನ್ವಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಮತ್ತು ರಕ್ಷಣಾಧಿಕಾರಿ ಕಪಿಲಾ ಸಂತ್ರಸ್ತ ಬಾಲಕಿಯ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಮಹಿಳಾ ಠಾಣಾ ಪೊಲೀಸ್ ನಿರೀಕ್ಷಕ ಮಂಜಪ್ಪ ಮಾರ್ಗ ದರ್ಶನದಲ್ಲಿ ಉಪನಿರೀಕ್ಷಕಿ ವೈಲೆಟ್ ಫೆಮಿನಾ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು