Wednesday, January 22, 2025
ಬಂಟ್ವಾಳ

ಬಂಟ್ವಾಳ ತಾಲೂಕಿನಲ್ಲಿ ಮನೆಯಲ್ಲಿ ಬೈದರು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ 14 ವರ್ಷದ ಬಾಲಕ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಚೆರ್ಕಳ ಎಂಬಲ್ಲಿ 9ನೇ ತರಗತಿಯ ವಿದ್ಯಾರ್ಥಿಯೋರ್ವ ಹೆತ್ತವರು ಬೈದರು ಎಂಬ ಸಣ್ಣ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮಹತ್ಯೆಗೈದ ಬಾಲಕನನ್ನು 14 ವರ್ಷದ ಹರ್ಷಿತ್ ಎಂದು ಗುರುತಿಸಲಾಗಿದ್ದು, ಈತ ಜಾತ್ರೆಯಿಂದ ಬರುವಾಗ ತಡವಾಗಿದ್ದಲ್ಲದೇ, ತಂಗಿಗೆ ಐಸ್ ಕ್ರೀಂ ಕೂಡಾ ತಂದಿಲ್ಲ ಎಂಬ ಕಾರಣಕ್ಕೆ ಮನೆಯಲ್ಲಿ ಹೆತ್ತವರು ಜೋರು ಮಾಡಿದ್ದರು. ಇದೇ ಕಾರಣವನ್ನು ನೆಪ ಮಾಡಿಕೊಂಡು ಮಾನಸಿಕವಾಗಿ ನೊಂದು ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು