Tuesday, January 21, 2025
ಸುದ್ದಿ

ಮಂಗಳೂರು, ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಹೊತ್ತಿ ಉರಿದ ಕಾರು-ಕಹಳೆ ನ್ಯೂಸ್

ಮಂಗಳೂರು : ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ ಕೊಲ್ನಾಡು ಸಮೀಪ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕಾರು ಸಂಪೂರ್ಣ ಹೊತ್ತಿ ಉರಿದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರು ಉರಿಯುವುದನ್ನು ಕಂಡ ಚಾಲಕ ಬದಿಗೆ ನಿಲ್ಲಿಸಿ ತಕ್ಷಣ ಕಾರಿನಿಂದ ಹೊರ ಬಂದಿದ್ದು. ತಮ್ಮ ಸಮಯ ಪ್ರಜ್ಞೆಯಿಂದ ಅಪಾಯದಿಂದ ಪಾರಾಗಿದ್ದಾರೆ. ನೋಡು ನೋಡುತ್ತಿದ್ದಂತೆ ಕಾರು ಸಂಪೂರ್ಣ ಹೊತ್ತಿ ಉರಿಯಲಾರಂಭಿಸಿದೆ. ಕೆಲ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಸ್ಥಳೀಯರ ಸಹಾಯದೊಡನೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು