ಪಾಕಿಸ್ತಾನದಲ್ಲಿ ಧ್ವಂಸಗೊಳಿಸಿದ ಹಿಂದೂ ದೇವಾಲಯಗಳನ್ನು ಮತ್ತೆ ನಿರ್ಮಿಸುವಂತೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಆದೇಶ-ಕಹಳೆ ನ್ಯೂಸ್
ಪಾಕಿಸ್ತಾನ : ಪಾಕಿಸ್ತಾನ ಸುಪ್ರೀಂ ಕೋರ್ಟ್ ಉದ್ರಿಕ್ತರು ಧ್ವಂಸ ಮಾಡಿದ ಶತಮಾನಗಳ ಇತಿಹಾಸ ಹೊಂದಿರುವ ಹಿಂದೂ ದೇವಾಲಯಗಳನ್ನು ಮತ್ತೆ ಪುನರ್ ನಿರ್ಮಾಣ ಮಾಡುವಂತೆ ಆದೇಶಿಸಿದೆ.
ಕಳೆದ ಡಿಸೆಂಬರ್ ನಲ್ಲಿ ಮತಾಂಧ ಜಮೈತ್ ಉಲೇಮಾ -ಇ- ಇಸ್ಲಾ ಪಾರ್ಟಿಯ ಸದಸ್ಯರಿಂದ ಖೈಬರ್ -ಪಖ್ತುನ್ಖ್ವಾ ಪ್ರಾಂತ್ಯದ ಕಾರಕ್ ಜಿಲ್ಲೆಯ ಟೆರ್ರಿ ಗ್ರಾಮದಲ್ಲಿನ ಹಿಂದೂ ದೇವಾಲಯವನ್ನು ನೆಲಸಮಗೊಳಿಸಲಾಗಿತ್ತು. ಈ ಘಟನೆಯನ್ನು ಮಾನವ ಹಕ್ಕುಗಳ ಹೋರಾಟಗಾರರು ಮತ್ತು ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮುಖಂಡರು ಖಂಡಿಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅಲ್ಲದೆ, ಕೋರ್ಟ್ ಮೆಟ್ಟಿಲೇರಿದ್ದರು. ಈ ಕಾರಣದಿಂದಾಗಿ ದೇವಾಲಯನ್ನು ಪುನರ್ ನಿರ್ಮಾಣ ಮಾಡುವಂತೆ ಕಳೆದ ತಿಂಗಳು ಸುಪ್ರೀಂಕೋರ್ಟ್ ನಿರ್ದೇಶಿಸಿತ್ತು. ಇದೀಗ ಆಗಿರುವ ಕಾಮಗಾರಿಯ ಪ್ರಗತಿಯ ಬಗ್ಗೆ ಕೋರ್ಟ್ ಮಾಹಿತಿ ಕೇಳಿದೆ.