Monday, January 20, 2025
ಬೆಳ್ತಂಗಡಿ

ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ವಿರುದ್ದ ದೂರು ಸಲ್ಲಿಸಿದ ಎಸ್.ಡಿ.ಪಿ.ಐ-ಕಹಳೆ ನ್ಯೂಸ್

ಬೆಳ್ತಂಗಡಿ : ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿಯ ಉಜಿರೆಯಲ್ಲಿ ಬಿಜೆಪಿಯ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆಪಾದಿಸಿರುವ ಎಸ್.ಡಿ.ಪಿ.ಐ , ಈ ಕುರಿತು ಬಂಟ್ವಾಳ ನಗರ ಠಾಣಾಧಿಕಾರಿಗಳಿಗೆ ದೂರು ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜ ಹಾಗೂ ಸಚಿವ ಈಶ್ವರಪ್ಪ ಮೇಲೆ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಬಂಟ್ವಾಳ ನಗರ ಠಾಣಾಧಿಕಾರಿಗಳಿಗೆ ಭಾಷಣದ ವೀಡಿಯೊ ಸಿ.ಡಿ ಲಗತ್ತಿಸಲ್ಪಟ್ಟ ದಾಖಲೆಗಳೊಂದಿಗೆ ಎಸ್.ಡಿ.ಪಿ.ಐ ಬಂಟ್ವಾಳ ಕ್ಷೇತ್ರ ಸಮಿತಿ ಸದಸ್ಯರಾದ ಮೂನೀಶ್ ಆಲಿ ದೂರು ನೀಡಿದರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್, ಕ್ಷೇತ್ರ ಅಧ್ಯಕ್ಷ ಯೂಸುಫ್ ಆಲಡ್ಕ, ಕ್ಷೇತ್ರ ಜೊತೆ ಕಾರ್ಯದರ್ಶಿ ಸಲೀಂ ಆಲಾಡಿ ಹಾಗೂ ಮಲಿಕ್ ಕೊಲಕೆ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು