Recent Posts

Monday, January 20, 2025
ಉಡುಪಿ

ಅತೀ ವೇಗದಿಂದ ಬೈಕ್ ಚಲಾಯಿಸಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸವಾರ 15 ವರ್ಷದ ಬಾಲಕನ ಸಾವು-ಕಹಳೆ ನ್ಯೂಸ್

ಉಡುಪಿ : ಬೈಂದೂರು ತಾಲೂಕಿನ ಶಿರೂರು ಅಳ್ವೆಗದ್ದೆ ಕ್ರಾಸ್ ಬಳಿ ಇಂದು ಮುಂಜಾನೆ ಅತೀ ವೇಗದಿಂದ ಬೈಕ್ ಚಲಾಯಿಸಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತಪಟ್ಟ ಬೈಕ್ ಸವಾರ 15 ವರ್ಷದ ಅರಾನ್ ಎಂದು ಗುರುತಿಸಲಾಗಿದ್ದು, ಈ ಹಡವಿನಕೋಣೆ ನಿವಾಸಿಯಾಗಿದ್ದಾನೆ. ಅಲ್ಲದೇ ಈತ ತಂದೆ-ತಾಯಿಗೆ ಒಬ್ಬನೇ ಮಗನಾಗಿದ್ದಾನೆ.

ಕಳೆದ ವಾರವಷ್ಟೇ ಪೊಲೀಸರು ಈತನ ಚಾಲನೆ ಪರವಾನಿಗೆ ಇಲ್ಲದೆ ಬೈಕ್ ಚಲಾಯಿಸುತ್ತಿದ್ದ ವೇಳೆ ಪತ್ತೆ ಹಚ್ಚಿ ದಂಡ ಕೂಡ ವಿಧಿಸಿದ್ದರು. ಮತ್ತೆ ಇಂದು ಮುಂಜಾನೆ ಅತೀ ವೇಗದಿಂದ ಬೈಕ್ ಚಲಾಯಿಸಿ ಸಾವನ್ನಪ್ಪಿದ್ದಾನೆ ಎಂದು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.