Monday, January 20, 2025
ಪುತ್ತೂರು

ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಪಾಲ್ಗೊಂಡ ಎನ್‍ಸಿಸಿ ಕೆಡೆಟ್ ರಕ್ಷಾ ಅಂಚನ್ ಗೆ ಅಭಿನಂದನೆ –ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿ ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ರಕ್ಷಾ ಅಂಚನ್ ಇವರು ನವದೆಹಲಿಯಲ್ಲಿ ಜನವರಿ 26ರಂದು ಜರಗಿದ ಪ್ರತಿಷ್ಠಿತ ಗಣರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಯಶಸ್ವಿಯಾಗಿ ಪಾಲ್ಗೊಂಡು, ಕಾಲೇಜಿಗೆ ಆಗಮಿಸುವ ಸಂದರ್ಭದಲ್ಲಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವನ್ನು ಫೆಬ್ರವರಿ 10 ರಂದು ಹಮ್ಮಿಕೊಳ್ಳಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ಸಂಚಾಲಕರಾದ ವಂ. ಲಾರೆನ್ಸ್ ಮಸ್ಕರೇನಸ್ ಇವರು ಅಭಿನಂದನೆಯನ್ನು ಸಲ್ಲಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಲಿಯೋ ನೊರೊನ್ಹಾ, ವಂ. ವಿಜಯ್ ಲೋಬೊ, ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ, ತಾಲೂಕು ಪಂಚಾಯತ್ ಸದಸ್ಯೆಯಾಗಿರುವ ರಕ್ಷಾ ಇವರ ತಾಯಿ ಉಷಾ ಅಂಚನ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಕಾಲೇಜಿನ ಎನ್‍ಸಿಸಿ ಅಧಿಕಾರಿ ಲೆ. ಜೊನ್ಸನ್ ಡೇವಿಡ್ ಸಿಕ್ವೇರ ಸಂಯೋಜಿಸಿದರು.