Monday, January 20, 2025
ಪುತ್ತೂರು

ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಜಾಗೃತಿ ಕುರಿತು ಪುತ್ತೂರಿನ ಸಂಸಾರ ಕಲಾ ತಂಡದಿಂದ ಬೀದಿ ನಾಟಕ ಪ್ರದರ್ಶನ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಸಂಸಾರ ಕಲಾ ತಂಡದಿಂದ ಬೀದಿ ನಾಟಕ ಪ್ರದರ್ಶನವು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಜಾಗೃತಿ ಕುರಿತು ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ನಡೆಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ನಾಟಕ ಪ್ರದರ್ಶನಗೊಂಡಿದ್ದು, ಆಯಾಯಾ ವ್ಯಾಪ್ತಿಯಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಜಾಗ್ರತಿ ನಾಟಕಕ್ಕೆ ಚಾಲನೆ ನೀಡಿದ್ದಾರೆ.

ಹಾಗೆಯೇ ಪುತ್ತೂರು ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ಸಹಾಯಕಿ ಹೇಮಾವತಿ ಅವರ ಮಾರ್ಗದರ್ಶನದಲ್ಲಿ ಸಂಸಾರ ಕಲಾ ತಂಡದ ಸಂಚಾಲಕ ಕೃಷ್ಣಪ್ಪ ಬಂಬಿಲ ಹಾಗೂ ಸಂಶುದ್ದಿನ್ ಸಂಪ್ಯ ಅವರ ನಿರ್ದೇಶನದಲ್ಲಿ ರವಿ ಪೆರ್ಲಂಪಾಡಿ, ದಿವ್ಯಾ ಸರ್ವೆ, ಲೋಕೇಶ್ ಗೌಡ ಬನ್ನೂರು, ನವೀನ್ ಪೆರ್ಲಂಪಾಡಿ, ಮೇಘನಾ , ಚಂದ್ರಮೌಲಿ, ಅವರು ಕಲಾವಿದರಾಗಿ ಅಭಿನಯಿಸುತ್ತಿದ್ದಾರೆ.