Monday, January 20, 2025
ಹೆಚ್ಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದರಲ್ಲಿ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಅಡ್ಡಗಟ್ಟಿ ಮನೆಗೆ ಕರೆದೊಯ್ದು ಅತ್ಯಾಚಾರ–ಕಹಳೆ ನ್ಯೂಸ್

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದರಲ್ಲಿ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಅಡ್ಡಗಟ್ಟಿ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ನಂತರ ಅತ್ಯಾಚಾರದ ವಿಡಿಯೋವನ್ನು ತನ್ನ ಸ್ನೇಹಿತರಿಗೆ ಶೇರ್ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಷ್ಟೇ ಅಲ್ಲದೇ ಅತ್ಯಾಚಾರದ ವಿಡಿಯೋವನ್ನು ಕಾಮುಕ ತನ್ನ ಸ್ನೇಹಿತರಿಗೆ ಶೇರ್ ಮಾಡಿದ್ದಾರೆ. ನಂತರದಲ್ಲಿ ಬಾಲಕಿ ನಡೆದ ಘಟನೆಯನ್ನ ತನ್ನ ಪೋಷಕರಿಗೆ ತಿಳಿಸಿದ್ದು, ಪೋಷಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಕಾಮುಕ ಮತ್ತು ವಿಡಿಯೋ ಶೇರ್ ಮಾಡಿಸಿಕೊಂಡಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ 15 ವರ್ಷದ ಬಾಲಕಿಯ ಮೇಲೆ 30ಕ್ಕೂ ಅಧಿಕ ಮಂದಿ ಅತ್ಯಾಚಾರಗೈದ ಸುದ್ದಿ ಬೆಳಕಿಗೆ ಬಂದಿತ್ತು. ಇದೀಗ ಅಂತಹದ್ದೇ ಸುದ್ದಿ ಕಾಫಿನಾಡು ಚಿಕ್ಕಮಗಳೂರಲ್ಲಿ ಬೆಳಕಿಗೆ ಬಂದಿರುವುದು ಮಲೆನಾಡಿಗರ ಆತಂಕಕ್ಕೆ ಕಾರಣವಾಗಿದೆ. 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಬಾಲಕಿನಿತ್ಯವೂ 4 ಕಿ.ಮೀ. ನಡೆದುಕೊಂಡು ಹೋಗುತ್ತಿದ್ದಳು. ಬಾಲಕಿ ಶಾಲೆಗೆ ತೆರಳುತ್ತಿದ್ದಾಗ ಅಡ್ಡಗಟ್ಟಿದ ಯುವಕ ಬಾಲಕಿಯನ್ನು ಪಕ್ಕದಲ್ಲಿಯೇ ಇದ್ದ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ನಂತರ ವಿಡಿಯೋ ಹಾಗೂ ಪೋಟೋವನ್ನು ಬಾಲಕಿಗೆ ತೋರಿಸಿ ಕರೆದಾಗ ಬರಬೇಕು. ಇಲ್ಲವಾದ್ರೆ ವಿಡಿಯೋ ಸೋಶೀಯಲ್ ಮೀಡಿಯಾದಲ್ಲಿ ಲೀಕ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ. ಮಲೆನಾಡಿನ ಭಾಗಗಳಲ್ಲಿ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿರುವುದು ಪೋಷಕರನ್ನು ಆತಂಕಕ್ಕೆ ಈಡುಮಾಡಿದೆ. ಅತ್ಯಾಚಾರಿಗಳ ವಿರುದ್ದ ಕಠಿಣ ಕ್ರಮಕೈಗೊಳ್ಳುವಂತೆ ಪೋಷಕರು ಆಗ್ರಹಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು