ನವದೆಹಲಿ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಪುಲ್ವಾಮಾ ಉಗ್ರರ ದಾಳಿಗೆ ಇಂದು ಎರಡು ವರ್ಷವಾಗಿದೆ. 2019ರಲ್ಲಿ ಫೆಬ್ರವರಿ 14ರಂದು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭದ್ರತಾ ಸಿಬ್ಬಂದಿಯನ್ನು ಸಾಗಿಸುವ ವಾಹನದ ಮೇಲೆ ಪುಲ್ವಾಮಾದ ಅವಾಂತಿಪೋರಾ ಬಳಿ ಐಇಡಿ ತುಂಬಿದ ಆತ್ಮಹತ್ಯಾ ಬಾಂಬರ್ ದಾಳಿ ನಡೆಸಲಾಯಿತು.
ಈ ದಾಳಿಯಿಂದಾಗಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) 40 ಯೋಧರು ಹುತ್ಮಾತರಾದರು. ಜಮ್ಮುವಿನಿಂದ ಶ್ರೀನಗರಕ್ಕೆ 2,500ಕ್ಕಿಂತ ಹೆಚ್ಚು ಸಿಆರ್ಪಿಎಫ್ ಯೋಧರು 78 ವಾಹನಗಳಲ್ಲಿ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ 22 ವರ್ಷದ ಆತ್ಮಹತ್ಯಾ ಬಾಂಬರ್ ಆದಿಲ್ ಅಹ್ಮದ್ ದಾರ್ ಸ್ಫೋಟಕ ತುಂಬಿದ ವಾಹನದೊಂದಿಗೆ ಬಸ್ಗೆ ದಾಳಿ ನಡೆಸಿದರು. ದಾಳಿಯ ಜವಾಬ್ದಾರಿಯನ್ನು ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಎಂ) ಹೊಣೆಯನ್ನು ಹೊತ್ತುಕೊಂಡಿತು. ಇದಾದ ಬಳಿಕ ಪಾಕಿಸ್ತಾನ ಬಾಲಕೋಟ್ ಉಗ್ರ ತರಬೇತಿ ಶಿಬಿರಕ್ಕೆ ವೈಮಾನಿಕ ದಾಳಿಯೊಂದಿಗೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಭಾರತ ತಿರುಗೇಟು ನೀಡಿತ್ತು.