Tuesday, January 21, 2025
ಹೆಚ್ಚಿನ ಸುದ್ದಿ

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವತಿಯಿಂದ ಪಂಚಾಮೃತ ಸಹಕಾರಿ ಮಾರ್ಟ್ ಉದ್ಘಾಟಿಸಿದ ಸಂಜೀವ ಮಠಂದೂರು-ಕಹಳೆ ನ್ಯೂಸ್

ಕಾವು : ಕಾವು ಇಲ್ಲಿ ನೂತನವಾಗಿ ಆರಂಭಗೊಂಡ ಪಂಚಾಮೃತ ಸಹಕಾರಿ ಮಾರ್ಟ್ ಇದರ ಉದ್ಘಾಟನಾ ಸಮಾರಂಭ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ವತಿಯಿಂದ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಲಾಯಿತು.

ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‍ಸಿಡಿಸಿಸಿ ಬ್ಯಾಂಕ್) ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಬೆಂಗಳೂರು ಇದರ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಎಸ್‍ಸಿಡಿಸಿಸಿ ಬ್ಯಾಂಕ್ ಸದಸ್ಯರಾದ ಶಶಿಕುಮಾರ್ ಬಾಲ್ಯೋಟ್ಟು, ಜಿಲ್ಲಾ ಪಂಚಾಯತ್ ಸದಸ್ಯರಾದ ಅನಿತಾ ಹೇಮನಾಥ ಶೆಟ್ಟಿ, ಸಂಘದ ನನ್ಯ ಅಚ್ಯುತ ಮೂಡತ್ತಾಯ, ಅರಿಯಡ್ಕ-ಮಾಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೌಮ್ಯ, ಉಪಾಧ್ಯಕ್ಷರಾದ ಸಂತೋಷ್, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.