Sunday, January 26, 2025
ಬೆಳ್ತಂಗಡಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ-ಕಹಳೆ ನ್ಯೂಸ್

ಬೆಳ್ತಂಗಡಿ: ಫೆಬ್ರವರಿ 16 ರಿಂದ 21 ರವರೆಗೆ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ವಿವಿಧ ವೈಧಿಕ ತಾಂತ್ರಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಹಾಗೂ ಕೃಪಾಶೀರ್ವಾದಗಳೊಂದಿಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಹಾಗೂ ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಅದ್ದೂರಿಯಾಗಿ ನಡೆಯಲಿದೆ. ಆಡಳಿತ ಸಮಿತಿ ಅಧ್ಯಕ್ಷರಾದ ಯನ್.ಅರವಿಂದ ಕುಡ್ಜ, ಬೆಳ್ತಂಗಡಿ ಶಾಸಕರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಹರೀಶ್ ಪೂಂಜ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಹೆಚ್.ವಿಜಯ್ ಕುಮಾರ್ ಕುಲಾಡಿ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ರಮೇಶ್ ರಾವ್ ಕಾಯಡ, ನವೀಕರಣ ಸಮಿತಿ ಅಧ್ಯಕ್ಷರಾದ ವಿಶ್ವನಾಥ ಗೌಡ ಕಲ್ಲದಂಬೆ, ಬ್ರಹ್ಮಕಲಶೋತ್ಸವ ಸಮಿತಿ ಮತ್ತು ನವೀಕರಣ ಸಮಿತಿ ಕಾರ್ಯದರ್ಶಿಜಯಂತ ಗೌಡ ಕಾಂತಿ ಪಿತ್ತಿಲು, ಆಡಳಿತ ಸಮಿತಿ ಕಾರ್ಯದರ್ಶಿ ರುಕ್ಮಯ್ಯ ಗೌಡ ಬರಮೇಲು, ಅರ್ಚಕರು ಕಿರಣ್ ಮೆಸ್ಕಾರ್, ಹಾಗೂ ಆಡಳಿತ ಸಮಿತಿ, ನವೀಕರಣ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಬ್ರಹ್ಮಕಲಶೋತ್ಸವ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು