Recent Posts

Monday, January 20, 2025
ಬೆಂಗಳೂರು

5 ಎಕರೆಗಿಂತ ಹೆಚ್ಚು ಜಮೀನು ಇರುವ ಮತ್ತು ಸರ್ಕಾರಿ ವರಮಾನ ಪಡೆಯುವವರ ಬಿಪಿಎಲ್ ಕಾರ್ಡ್ ಕ್ಯಾನ್ಸಲ್: ಉಮೇಶ್ ಕತ್ತಿ-ಕಹಳೆ ನ್ಯೂಸ್

ಬೆಂಗಳೂರು: ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ, ಈ ಹಿಂದೆ ಮಾನದಂಡಗಳೇ ಮುಂದುವರಿಸಲಾಗುವುದು ಎಂದು ಉಮೇಶ್ ಕತ್ತಿ ಯೂಟರ್ನ್ ಹೊಡೆದಿದ್ದಾರೆ.

ಮನೆಯಲ್ಲಿ ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಅವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗುವುದು ಎಂದು ಹೇಳಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು, ಸಾರ್ವಜನಿಕರಿಂದ ಹಾಗೂ ಸ್ವಪಕ್ಷದ ಶಾಸಕರಿಂದಲೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್ ಮೊದಲಿದ್ದ ನಿಯಮವೇ ಅನ್ವಯವಾಗುತ್ತದೆ ಎಂದರು. ಈ ಸಂಬ0ಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಉಮೇಶ್ ಕತ್ತಿ ಅವರು, ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ ಅವರು, ‘ಐದು ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರು, ಮನೆಯಲ್ಲಿ ಬೈಕ್, ಟೆಲಿವಿಷನ್, ಫ್ರಿಡ್ಜ್ ಹೊಂದಿದ್ದವರ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುವುದು. ಇಂತಹ ಬಿಪಿಎಲ್ ಕಾರ್ಡುದಾರರು ತಮ್ಮ ಕಾರ್ಡ್ಗಳನ್ನು ಹಿಂದಿರುಗಿಸಲು ಮಾರ್ಚ್ 31ರ ವರೆಗೂ ಸಮಯ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಅಲ್ಲದೆ ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು ಮತ್ತು ವರ್ಷಕ್ಕೆ 1.20 ಲಕ್ಷ ರೂಗಿಂತ ಅಧಿಕ ವರಮಾನ ಹೊಂದಿರುವವರು ಸಹ ಬಿಪಿಎಲ್ ಕಾರ್ಡ್ ಹೊಂದಿರುವ0ತಿಲ್ಲ. ಇಲ್ಲದಿದ್ದರೆ ಸರ್ಕಾರವೇ ಸಮೀಕ್ಷೆ ನಡೆಸಿ ಕಾರ್ಡುಗಳನ್ನು ಹಿಂಪಡೆಯುತ್ತದೆ. ಏಪ್ರಿಲ್ ಬಳಿಕ ಸರ್ಕಾರ ಬಿಪಿಎಲ್ ಕಾರ್ಡುದಾರರ ಪರಿಶೀಲನೆ ನಡೆಸಲಿದ್ದು, ಈ ವೇಳೆ ಎಲ್ಲಾ ಸೌಲಭ್ಯಗಳು ಇದ್ದರೂ ಬಿಪಿಎಲ್ ಕಾರ್ಡು ಹೊಂದಿದ್ದರೆ ಅಂತಹವರಿಗೆ ದಂಡದ ಜತೆಗೆ ಶಿಕ್ಷೆ ಸಹ ನೀಡಲಾಗುತ್ತದೆ’ ಎಂದು ಉಮೇಶ್ ಕತ್ತಿ ಎಚ್ಚರಿಕೆ ನೀಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು