Monday, January 20, 2025
ಪುತ್ತೂರು

ಫೆಬ್ರವರಿ 18 ರಂದು ಸಂತ ಫಿಲೋಮಿನಾ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ-ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗ, ಸ್ನಾತಕೋತ್ತರ ಗಣಕ ವಿಜ್ಞಾನ ವಿಭಾಗ, ತರಬೇತಿ ಮತ್ತು ನೇಮಕಾತಿ ಘಟಕ ಇವುಗಳ ಆಶ್ರಯದಲ್ಲಿ ಪ್ರತಿಷ್ಠಿತ ಬಹುರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಾದ ದಿಯಾ ಸಿಸ್ಟಮ್ಸ್ ಮಂಗಳೂರು ಇದರ ವತಿಯಿಂದ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಫೆಬ್ರವರಿ 18 ರಂದು ಕಾಲೇಜಿನ ಸ್ನಾತಕೋತ್ತರ ಸೆಮಿನಾರ್ ಸಭಾಂಗಣದಲ್ಲಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯನ್ನು ಆಯೋಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶೈಕ್ಷಣಿಕ ವರ್ಷ 2018, 2019 ಹಾಗೂ 2019 ರಲ್ಲಿ ತೇರ್ಗಡೆ ಹೊಂದಿದ ಬಿಸಿಎ, ಬಿಎಸ್ಸಿ ಕಂಪ್ಯೂಟರ್ ಸೈನ್ಸ್, ಎಮ್‍ಎಸ್ಸಿ ಕಂಪ್ಯೂಟರ್ ಸೈನ್ಸ್ ಅಥವಾ ಎಮ್‍ಸಿಎ ಪದವೀಧರರು ಈ ಸಂದರ್ಶನದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಇಂಗ್ಲೀಷ್ ಭಾಷೆಯಲ್ಲಿ ಉತ್ತಮ ಸಂವಹನ ಸಾಮಥ್ರ್ಯವನ್ನು ಹೊಂದಿರುವವರು, ತಂಡದೊಂದಿಗೆ ಬೆರೆತುಕಾರ್ಯ ನಿರ್ವಹಿಸಲು ಸಾಧ್ಯವಿರುವವರು ಹಾಗೂ ಶಿಪ್ಟ್‍ನಲ್ಲಿ ಕಾರ್ಯನಿರ್ವಹಿಸಲು ಆಸಕ್ತಿಯಿರುವವರು ಈ ಅವಕಾಶವನ್ನು ಪಡೆದುಕೊಳ್ಳಬಹುದು. ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಬಿಸಿಎ ಹಾಗೂ ಅಂತಿಮ ವರ್ಷದ ಎಮ್‍ಎಸ್ಸಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳಿಗೆ ಇಂಟರ್ನ್‍ಶಿಪ್ ಸೌಲಭ್ಯದ ಅವಕಾಶವಿರುತ್ತದೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಸ್ವವಿವರ, ಅಂಕ ಪಟ್ಟಿಗಳ ಮೂಲ ಪ್ರತಿಗಳು ಹಾಗೂ ಆಧಾರ ಕಾರ್ಡಿನೊಂದಿಗೆ ಬೆಳಿಗ್ಗೆ 9 ಘಂಟೆಗೆ ಸರಿಯಾಗಿ ಸಂದರ್ಶನಕ್ಕೆ ಹಾಜರಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಗೀತಾ ಪೂರ್ಣಿಮಾ (ಮೊ:9986596266) ಇವರನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪಿಆರ್‍ಒ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು