Recent Posts

Monday, January 27, 2025
ಸುದ್ದಿ

ಫೆಬ್ರವರಿ 16, 17 ಹಾಗೂ 20 ರಂದುಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ-ಕಹಳೆ ನ್ಯೂಸ್

ಮಂಗಳೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಫೆಬ್ರವರಿ 16, 17 ಹಾಗೂ 20 ರಂದುಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಫೆಬ್ರವರಿ 16 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ¯ ಹಾಗೂ ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಮತ್ತು ಫೆಬ್ರವರಿ 17ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಫೆಬ್ರವರಿ 20ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು