Sunday, November 24, 2024
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ‘ಪ್ರೊಗ್ರಾಮಿಂಗ್ ಲಾಜಿಕ್ಸ್ ಫಾರ್ ಮ್ಯಾಥಮೆಟಿಕ್ಸ್’ ವಿಶೇಷ ಉಪನ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ಗಣಿತದ ಜೊತೆಗೆ ಗಣಕ ವಿಜ್ಞಾನದ ಅಧ್ಯಯನ ಮಾಡುವುದರಿಂದ ಮುಂದೆ ಸಾಪ್ಟ್‍ವೇರ್ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುತ್ತಮ ಅವಕಾಶಗಳಿವೆ ಎಂದು ವಿವೇಕಾನಂದ ಪದವಿ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಉಪನ್ಯಾಸಕ ಸೂರ್ಯನಾರಯಣ ಪಿ. ಎಸ್. ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ಸ್ನಾತಕೋತ್ತರ ಗಣಿತ ಶಾಸ್ತ್ರ ವಿಭಾಗ, ಐಕ್ಯುಎಸಿ ಘಟಕದ ಸಹಯೋಗದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ‘ಪ್ರೋಗ್ರಾಮಿಂಗ್ ಲಾಜಿಕ್ಸ್ ಫಾರ್ ಮ್ಯಾಥಮೆಟಿಕ್ಸ್’ ವಿಷಯದ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಮಾತನನಾಡಿ, ಪ್ರಸ್ತುತ ದಿನಗಳಲ್ಲಿ ಗಣಿತದ ಜೊತೆಗೆ ಗಣಕ ವಿಜ್ಞಾನವನ್ನು ಕಲಿಯುವುದು ಆವಶ್ಯಕವಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಇತರ ತಂತ್ರಜ್ಞಾನ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ಅವಕಾಶ ವಿದ್ಯಾರ್ಥಿಗಳಿಗೆ ಸುಲಭವಾಗಿಸಿಗುತ್ತದೆ. ಕಲಿಕೆಯಲ್ಲಿ ಸಿಗುವ ಪ್ರತಿಯೊಂದು ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದರು. ವಿದ್ಯಾರ್ಥಿನಿ ಪಲ್ಲವಿ ಪ್ರಾರ್ಥಿಸಿದರು. ಸ್ನಾತಕೋತ್ತರ ಗಣಿತ ಶಾಸ್ತ್ರ ವಿಭಾಗದ ಉಪನ್ಯಾಸಕ ಪ್ರತೀಕ್ ರೈ ಸ್ವಾಗತಿಸಿ, ಉಪನ್ಯಾಸಕಿ ಅನುಶ್ರೀ ವಂದಿಸಿದರು. ಉಪನ್ಯಾಸಕಿ ನಮೃತ ಕೆ. ಎನ್. ಕಾರ್ಯಕ್ರಮವನ್ನು ನಿರೂಪಿಸಿದರು.