Monday, January 27, 2025
ಪುತ್ತೂರು

ಜೀವನದಲ್ಲಿ ಧನಾತ್ಮಕ ಯೋಚನೆಗಳಿದ್ದರೆ ಯಶಸ್ಸು ಕಾಣಲು ಸಾಧ್ಯ; ಪ್ರೊ. ಸೀಮಾ ಪ್ರಭು-ಕಹಳೆ ನ್ಯೂಸ್

ಪುತ್ತೂರು : ದೇಶವನ್ನು ಬೆಳೆಸುವ ಕೆಲಸ ರಾಷ್ಟ್ರೀಯ ಸೇವಾ ಯೋಜನೆ ಮಾಡುತ್ತದೆ. ಆದ್ದರಿಂದ ಸಮಾಜ ಸೇವೆ ಮಾಡುವ ಮನೋಭಾವ ಸ್ವಯಂ ಸೇವಕರಲ್ಲಿ ಇರಬೇಕು. ಒಂದು ಕಾರ್ಯಕ್ರಮವನ್ನು ಯಾವ ರೀತಿಯಲ್ಲಿ ನಡೆಸಬೇಕು ಎಂದು ಎನ್.ಎಸ್.ಎಸ್. ತಿಳಿಸುತ್ತದೆ, ಜೊತೆಗೆ ನಾನು ನನ್ನದು ಎನ್ನದೆ ಗುಂಪಿನಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡುವುದನ್ನು ಕಲಿಸುತ್ತದೆ. ಧನಾತ್ಮಕ ಚಿಂತನೆಗಳೊಂದಿಗೆ ನಿಯಮ ಪಾಲಿಸಿ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಉತ್ತಮ ಎಂದು ಮಂಗಳೂರು ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ. ಸೀಮಾ ಪ್ರಭು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇಲ್ಲಿನ ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಯನ್ನು ಉದ್ಘಾಟಿಸಿ ಸೋಮವಾರ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಎಲ್ಲರಿಗಿಂತಲು ವಿಭಿನ್ನವಾದವರು. ತಮ್ಮನ್ನು ತಾವು ತೊಡಗಿಸಿಕೊಂಡು ಒಂದು ವ್ಯವಸ್ಥೆಗೆ ಹೊಂದಿಕೊಳ್ಳುವ ಗುಣ ಎನ್.ಎಸ್.ಎಸ್. ಸ್ವಯಂ ಸೇವಕರಲ್ಲಿ ಇರುತ್ತದೆ. ನಿತ್ಯ ಜೀವನದ ಎಲ್ಲಾ ವಿಷಯಗಳನ್ನು ಮತ್ತು ಒಬ್ಬ ವ್ಯಕ್ತಿಯನ್ನು ಪರಿಪೂರ್ಣ ವ್ಯಕ್ತಿಯನ್ನಾಗಿ ಮಾಡುವುದು ಈ ಸಂಘದ ಕರ್ತವ್ಯ. ಜೀವನದಲ್ಲಿ ಧನಾತ್ಮಕ ಯೋಚನೆಗಳಿದ್ದರೆ ಯಶಸ್ಸು ಕಾಣಲು ಸಾಧ್ಯ ಎಂದು ನುಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ವರುಣ್ ಐ ಮತ್ತು ಭವಿಷ್ಯತ್ ನಾಯಕಿ ಲಹರಿ ಮತ್ತು ಭವ್ಯಶ್ರೀ ಉಪಸ್ಥಿತರಿದ್ದರು. ಆಶಯ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ರೀನಾಥ್ ಬಿ ಪ್ರಾಸ್ತಾವಿಸಿ, ಸ್ವಾಗತಿಸಿದರು. ಯೋಜನಾಧಿಕಾರಿ ವಿದ್ಯಾ ಕೆ. ಎನ್. ವಂದಿಸಿ ಸ್ವಯಂಸೇವಕಿ ಸುಮೇಧ ಕಾರ್ಯಕ್ರಮವನ್ನು ನಿರೂಪಿಸಿದರು.