Sunday, January 26, 2025
ಹೆಚ್ಚಿನ ಸುದ್ದಿ

ರಾಮ ಮಂದಿರ ನಿರ್ಮಾಣ ಕುರಿತು ನೀಡಿರುವ ಸಿದ್ದರಾಮಯ್ಯರ ಹೇಳಿಕೆಯು ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿದ್ದು; ಸಿ.ಎಂ ಯಡಿಯೂರಪ್ಪ-ಕಹಳೆ ನ್ಯೂಸ್

ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಮ ಮಂದಿರ ನಿರ್ಮಾಣ ಕುರಿತು ನೀಡಿರುವ ಹೇಳಿಕೆಯು ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿದ್ದು ಕೋರ್ಟ್ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯನವರು, ಸುಪ್ರೀಂ ಕೋರ್ಟ್ ರಾಮ ಮಂದಿರ ವಿಚಾರದ ಈ ತೀರ್ಪು ನೀಡಿದ್ದರೂ ಈ ವಿಚಾರದಲ್ಲಿ ಈಗಲೂ ವಿವಾದಗಳು ಇವೆ. ಸುಪ್ರೀಂ ಕೋರ್ಟ್ ಹೇಳಿದೆ ಹಾಗಾಗಿ ರಾಮ ಮಂದಿರ ಕಟ್ಟಿಕೊಳ್ಳಲ್ಲಿ. ಇದರಲ್ಲಿ ನನ್ನದೇನು ತಕರಾರು ಇಲ್ಲ. ಆದರೆ ನಾನು ಬೇರೆ ರಾಮ ಮಂದಿರಕ್ಕೆ ದೇಣಿಗೆ ನೀಡುವೆ ಈ ರಾಮ ಮಂದಿರಕ್ಕೆ ನೀಡಲ್ಲ ಎಂದು ಹೇಳಿದ್ದರು. ರಾಮ ಮಂದಿರ ನಿರ್ಮಾಣಕ್ಕೆ ಹಿಂದೂ, ಮುಸ್ಮಿಂ, ಕ್ರೈಸ್ತರು ಸೇರಿದಂತೆ ಎಲ್ಲರೂ ದೇಣಿಗೆ ನೀಡುತ್ತಿದ್ದಾರೆ. ಅದನ್ನು ಸಹಿಸಲಾಗದೆ, ಕೆಲವರು ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಜನರಲ್ಲಿ ಅನಗತ್ಯವಾಗಿ ಗೊಂದಲ ಸೃಷ್ಟಿಸುವ ಹುನ್ನಾರ ಮಾಡಿದ್ದಾರೆ ಎಂದು ಹೇಳಿದರು. ಬುಧವಾರ ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಬಿಎಸ್‍ವೈ ಅವರು, ಸಿದ್ದರಾಮಯ್ಯನವರ ಹೇಳಿಕೆಯನ್ನು ಟೀಕಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು