Monday, January 20, 2025
ಹೆಚ್ಚಿನ ಸುದ್ದಿ

ಉತ್ತರಪ್ರದೇಶದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ಬಾಲಕಿಯರ ನಿಗೂಢ ಸಾವು; ಇನ್ನೊಬ್ಬ ಬಾಲಕಿಯ ಸ್ಥಿತಿ ಗಂಭೀರ-ಕಹಳೆ ನ್ಯೂಸ್

ಲಕ್ನೋ : ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ಬಾಲಕಿಯರು ನಿಗೂಢವಾಗಿ ಸಾವನ್ನಪ್ಪಿದ್ದು, ಹಲ್ಲೆಗೆ ತುತ್ತಾಗಿದ್ದ ಇನ್ನೊಬ್ಬ ಬಾಲಕಿಯ ಸ್ಥಿತಿ ಗಂಭೀರವಾದ ಘಟನೆ ಉತ್ತರಪ್ರದೇಶದ ಉನಾವೋ ಜಿಲ್ಲೆಯ ಅಶೋಹ ಬ್ಲಾಕ್ ನಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಈ ಮೂವರು ಬಾಲಕಿಯರ ಮೇಲೆ ಹಲ್ಲೆ ನಡೆಸಲಾಗಿದ್ದು, ಮೃತಪಟ್ಟ ಇಬ್ಬರು ಬಾಲಕಿಯರ ಮೃತದೇಹ ಕೈ ಕಾಲುಗಳನ್ನು ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಈ ಸಂಬಂಧ ಆರು ತಂಡಗಳನ್ನು ರಚಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆಯ ನೇತೃತ್ವ ವಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು