Recent Posts

Monday, January 20, 2025
ಬೆಂಗಳೂರು

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಪಡಿತರದ ಮೂಲಕ ನೀಡುತ್ತಿರುವ ಅಕ್ಕಿಯ ಸಮಸ್ಯೆಯ ಬಗ್ಗೆ ಮನವಿ-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾಗಿ ಪಡಿತರದ ಮೂಲಕ ನೀಡುತ್ತಿರುವ ಅಕ್ಕಿಯ ಸಮಸ್ಯೆಯ ಬಗ್ಗೆ ಮನವಿ ಸಲ್ಲಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಪಡಿತರ ಅಕ್ಕಿಯ ಸಮಸ್ಯೆ ಬಗ್ಗೆ ಮನವಿ ಮಾಡಿ ಪ್ರಸ್ತುತ ನೀಡುತ್ತಿರುವ ಕೊಚ್ಚಿಗೆ ಅಕ್ಕಿ ಅತ್ಯಂತ ಕಳಪೆ ಮಟ್ಟದ್ದಾಗಿದೆ. ಹೀಗಾಗಿ ಜನಸಾಮಾನ್ಯರು ಅದರಲ್ಲೂ ಬಡವರು ಅಕ್ಕಿಯನ್ನು ಉಪಯೋಗಿಸಲಾರದೆ ಕಡಿಮೆ ದರಕ್ಕೆ ಮಾರಾಟ ಮಾಡಿ, ಹೆಚ್ಚು ದರದ ಅಕ್ಕಿಯನ್ನು ಪಡೆಯುತ್ತಿದ್ದಾರೆ. ಕೆಲವು ಕಡೆ ಪಡಿತರ ಅಕ್ಕಿಯನ್ನು ಪಡೆಯದೆ ಉಪಯೋಗವಿಲ್ಲದ ಹಾಗೆ ಬಿಡುತ್ತಿದ್ದಾರೆ. ಇನ್ನೊದೆಡೆ ಪಡಿತರದ ಮೂಲಕ ಪಡೆದುಕೊಂಡ ಕಳಪೆ ಗುಣಮಟ್ಟದ ಅಕ್ಕಿಯನ್ನು ಮಾರಾಟ ಮಾಡಿದ ಹಿನ್ನಲೆಯಲ್ಲಿ ಕ್ರಿಮಿನಲ್ ಕೇಸುಗಳು ದಾಖಲಾಗುತ್ತಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಬೇಕಾಗುವ ಅಕ್ಕಿಯನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿಯೇ ಬೆಳೆಯುವ ಕುಚ್ಚಲಕ್ಕಿಯನ್ನು ತೆಗೆದುಕೊಂಡು ಅಲ್ಲಿಯೇ ಪಡಿತರ ವಿತರಿಸಬೇಕೆಂದು ಹಾಗೂ ಅಲ್ಲಿಯವರೆಗೆ ಪಡಿತರದ ಮೂಲಕ ನೀಡುವ ಅಕ್ಕಿಯ ಮೌಲ್ಯವನ್ನು ನೇರವಾಗಿ ಮಹಿಳೆಯರ ಖಾತೆಗೆ ಜಮಾ ಮಾಡಿ ಅವರಿಗೆ ಬೇಕಾದ ಅಕ್ಕಿಯನ್ನು ಅವರೇ ಖರೀದಿಸುವ ಸಲುವಾಗಿ ರಾಜ್ಯದಲ್ಲಿಯೇ ಮೊದಲಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೈಲೆಟ್ ಯೋಜನೆ ಕೈಗೆತ್ತಿಕೊಳ್ಳಬೇಕಾಗಿ ಕೋರಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸನ್ಮಾನ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಅಂಗಾರ, ಶಾಸಕರಾದ ಉಮಾನಾಥ ಕೋಟ್ಯಾನ್, ಸಂಜೀವ ಮಠಂದೂರು, ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು.