Saturday, November 23, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಯಕ್ಷರಂಗ ಸಿಡಿಲಮರಿ, ಧೀಂಗಿಣ ವೀರ ಡಾ. ಶ್ರೀಧರ ಭಂಡಾರಿ ಪುತ್ತೂರು ಇನ್ನಿಲ್ಲ – ಕಹಳೆ ನ್ಯೂಸ್

ಪುತ್ತೂರು :ಫೆ 19 : ಯಕ್ಷಗಾನ ರಂಗದ ಪುಂಡು ವೇಷಧಾರಿ, ಹಿರಿಯ ಯಕ್ಷಗಾನ ಕಲಾವಿದ , ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಯಕ್ಷಲೋಕದ ಸಿಡಿಲಮರಿ ಎಂದೇ ಪ್ರಖ್ಯಾತಿಯನ್ನು ಗಳಿಸಿದ ಡಾ. ಶ್ರೀಧರ್ ಭಂಡಾರಿ (73 ವ) ಅವರು ಇಂದು ಮುಂಜಾನೆ ಇಹಲೋಕ ತ್ಯಜಿಸಿದರು.

ಮೃತರು ಪತ್ನಿ ಉಷಾ ಭಂಡಾರಿ, ಪುತ್ರಿಯರಾದ ಕೋಕಿಲ, ಶಾಂತಲಾ, ಅನಿಲ ಹಾಗೂ ಪುತ್ರ ದೇವಿ ಪ್ರಕಾಶ , ದೊಡ್ಡ ಸಂಖ್ಯೆಯ ಶಿಷ್ಯರನ್ನು ಹಾಗೂ ಅಸಂಖ್ಯಾತ ಅಭಿಮಾನಿಗಳನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಧೀಂಗಿಣ ವೀರ ಎಂದೇ ಯಕ್ಷ ಲೋಕದಲ್ಲಿ ಗುರಿತಿಸಿಕೊಂಡಿದ್ದ ಡಾ. ಶ್ರೀಧರ್ ಭಂಡಾರಿಯವರು ತನ್ನ ಉಚ್ಛ್ರಾಯ ಕಾಲದಲ್ಲಿ 200ರಿಂದ 250ರಷ್ಟು ಧೀಂಗಿಣ ಹಾಕುತಿದ್ದರು. ಅವರು ತಮ್ಮ 62 ನೆಯ ವಯಸ್ಸಿನಲ್ಲಿ ಖಾಸಗಿ ಸುದ್ದಿವಾಹಿನಿಯ ‘ಶಭಾಶ್ ಇಂಡಿಯಾ’ ಕಾರ್ಯಕ್ರಮದಲ್ಲಿ ಭಾಗವಹಿಸಿ 3 ನಿಮಿಷಗಳಲ್ಲಿ 148 ಧೀಂಗಿಣಗಳನ್ನು ಹೊಡೆದು ದಾಖಲೆ ನಿರ್ಮಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು