Tuesday, January 21, 2025
ಹೆಚ್ಚಿನ ಸುದ್ದಿ

ತುಮಕೂರಿನಲ್ಲಿ ಮದುವೆಗೆ ಹೊರಟಿದ್ದ ಬಸ್ ಉರುಳಿ ಬಿದ್ದ ಪರಿಣಾಮ ಇಬ್ಬರ ಸಾವು; 20 ಮಂದಿಗೆ ಗಾಯ-ಕಹಳೆ ನ್ಯೂಸ್

ತುಮಕೂರು : ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮೆಕ್ಕೇರಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಮದುವೆಗೆ ಹೊರಟಿದ್ದ ಬಸ್ ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆ ವಿನಾಯಕ ಹೆಸರಿನ ಖಾಸಗಿ ಬಸ್ ನಲ್ಲಿ ತೋವಿನಕೆರೆ ಸಮೀಪದ ಶಂಭೇನಹಳ್ಳಿ ಗೊಲ್ಲರಹಟ್ಟಿ ಗ್ರಾಮದಿಂದ ಶಿರಾ ತಾಲೂಕಿನ ಬುಕ್ಕಾಪಟ್ಟಣ ಗ್ರಾಮಕ್ಕೆ ಮದುವೆ ಕಾರ್ಯಕ್ರಮಕ್ಕೆ ಹೊರಟಿದ್ದರು. ಈ ಸಂದರ್ಭದಲ್ಲಿ ಶಿರಾ ತಾಲೂಕಿನ ಮೇಕರೆಹಳ್ಳಿ ಬಳಿ ಬಸ್ ಆಯತಪ್ಪಿ ಉರುಳಿ ಬಿದ್ದಿದೆ ಎನ್ನಲಾಗಿದೆ. ಇದರಿಂದ ಗಾಯಗೊಂಡವರನ್ನು ಶಿರಾ ಸರ್ಕಾರಿ ಆಸ್ವತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗೊಂಡಿರುವವರನ್ನು ತುಮಕೂರು ಜಿಲ್ಲಾ ಆಸ್ವತ್ರೆಗೆ ಸೇರಿಸಲಾಗಿದೆ. ಈ ಕುರಿತು ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು