Recent Posts

Monday, January 27, 2025
ಹೆಚ್ಚಿನ ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ಮನೆಯ ಪಕ್ಕಾಸಿಗೆ ಚೂಡಿದಾರ ಶಾಲು ಬಿಗಿದು ಪದವಿ ವಿದ್ಯಾರ್ಥಿನಿಯೊರ್ವಳು ಆತ್ಮಹತ್ಯೆ-ಕಹಳೆ ನ್ಯೂಸ್

ವೇಣೂರು : ಮನೆಯ ಪಕ್ಕಾಸಿಗೆ ಚೂಡಿದಾರ ಶಾಲು ಬಿಗಿದು ಪದವಿ ವಿದ್ಯಾರ್ಥಿನಿಯೊರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಕತ್ತೋಡಿಬೈಲು ಬಳಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳ್ತಂಗಡಿ ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿರುವ ಸೌಮ್ಯಾ ಲಾಕ್‍ಡೌನ್ ಬಳಿಕ ತರಗತಿಗೆ ತೆರಳದೆ ಮಾನಸಿಕವಾಗಿ ಕುಗ್ಗಿದ್ದರು ಎಂದು ತಿಳಿದು ಬಂದಿದೆ.

ಬೆಳಗ್ಗೆ ಎದ್ದು ಉಪಹಾರ ಸೇವಿಸಿದ್ದ ಸೌಮ್ಯ ಬಳಿಕ ಮನೆಯಲ್ಲಿ ಕಾಣಿಸಿಕೊಂಡಿರಲಿಲ್ಲ.

ಇನ್ನು ಈ ವೇಳೆ ಮನೆ ಮಂದಿ ಹುಡುಕಾಟ ನಡೆಸಿದಾಗ ಮೇಲ್ಛಾವಣಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ವೇಣೂರು ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.