Monday, January 27, 2025
ಬಂಟ್ವಾಳ

ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಉರುವಾಲು ಎಂಬಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪೋಕ್ಸೊ ಪ್ರಕರಣದಡಿ ಆರೋಪಿಯ ಬಂಧನ-ಕಹಳೆ ನ್ಯೂಸ್

ಬಂಟ್ವಾಳ : ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಉರುವಾಲು ಎಂಬಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೊ ಪ್ರಕರಣದಡಿ ಆರೋಪಿಯನ್ನ ಬಂಧಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಮದ್ ನೆಕ್ಕಿಲ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಉರುವಾಲು ಗ್ರಾಮದ ಕುಪ್ಪೆಟ್ಟಿಯ ನೆಕ್ಕಿಲ್ ಎಂಬಲ್ಲಿ ಬಾಡಿಗೆ ಮನೆಯಲ್ಲಿ ಬಾಲಕಿಯು ತನ್ನ ತಾಯಿ, ಅಜ್ಜಿ, ತಮ್ಮನ ಜೊತೆ ವಾಸ್ತವ್ಯವಿದ್ದು, ಕಳೆದ 3 ತಿಂಗಳ ಹಿಂದೆ ಬಾಡಿಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಸಮದ್ ಮನೆಯ ರಿಫೇರಿ ಕೆಲಸವನ್ನು ಮಾಡಲು ಬಂದಿದ್ದಾನೆ. ಬಳಿಕ ಆರೋಪಿ ಬಾಲಕಿಯ ಮನೆಯ ಸಂಪರ್ಕವನ್ನಿಟ್ಟುಕೊಂಡಿದ್ದನು ಎನ್ನಲಾಗಿದೆ.

ಇನ್ನು ಆರೋಪಿ ಡಿಸೆಂಬರ್ ತಿಂಗಳ ಮೊದಲ ವಾರದಲ್ಲಿ ರಾತ್ರಿ ವೇಳೆ ಮನೆಗೆ ಬಂದು ಬಾಲಕಿಯ ತಾಯಿಯನ್ನು ಕೊಠಡಿಯೊಂದರಲ್ಲಿ ಕೂಡಿ ಹಾಕಿ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ಮನೆಯವರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣಾ ಎಸ್.ಐ ಸೌಮ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.