Monday, January 20, 2025
ಪುತ್ತೂರು

ಶಿವಾಜಿ ಮಹಾರಾಜರ ಆದರ್ಶವನ್ನು ಪಾಲನೇ ಮಾಡಬೇಕು: ತಿರುಮಲೇಶ್ವರ ಭಟ್-ಕಹಳೆ ನ್ಯೂಸ್

ಪುತ್ತೂರು:ಶಿವಾಜಿ ಮಹಾರಾಜರನ್ನು ಪಡೆದ ನಾವು ಮತ್ತು ನಮ್ಮ ದೇಶದ ಜನತೆ ಪುಣ್ಯವಂತರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂತಹಾ ಮಹಾನ್ ಪುರುಷನ ಶೌರ್ಯ, ಜಾಣ್ಮೆ, ಸಾಹಸ, ದೇಶ ಪ್ರೇಮ ಅವರ ಜೀವನ ಚರಿತ್ರೆಯ ಇನ್ನೂ ಅನೇಕ ವಿಚಾರಗಳು ಕೇವಲ ಭಾರತದಲ್ಲಿ ಮಾತ್ರವಲ್ಲದೆ ಇಡೀ ವಿಶ್ವದಲ್ಲಿಯೇ ಕೊಂಡಾಡುವ0ತಾಗಿದೆ ಎಂದು ಶ್ರೀರಾಮ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ತಿರುಮಲೇಶ್ವರ ಭಟ್ ಹೇಳಿದರು. ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ನಡೆದ ಶಿವಾಜಿ ಮಹಾರಾಜನ ಜನ್ಮ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ಶಿವಾಜಿ ಮಹಾರಾಜರ ಜೀವನ ಚರಿತ್ರೆಯನ್ನು ಅಧ್ಯಯನ ಮಾಡಿ ಅವರ ಆದರ್ಶವನ್ನು, ಜೀವನ ಚರಿತ್ರೆಯನ್ನು ಈಗಿನ ಮತ್ತು ಮುಂದಿನ ತಲೆಮಾರಿಗೆ ತಿಳಿಸುವುದಲ್ಲದೇ ಪಾಲನೇ ಮಾಡಬೇಕಾಗಿದೆ. ಶಿವಾಜಿ ಆಡಳಿತಾವಧಿಯಲ್ಲಿ ಸಾಂಪ್ರದಾಯಿಕ ಹಿಂದೂ ಮೌಲ್ಯಗಳಿಗೆ ಹಾಗೂ ಶಿಕ್ಷಣಕ್ಕೆ ಪ್ರಾಮುಖ್ಯತೆಯನ್ನು ನೀಡಲಾಗುತ್ತಿತ್ತು. ಛತ್ರಪತಿ ಶಿವಾಜಿ ಮಹಾರಾಜನು ತನ್ನ ಜೀವನದುದ್ದಕ್ಕೂ ಸಾಹಸವನ್ನು ಮಾಡಿದವನು ಹಾಗೂ ಬಡಜನರಿಗೆ, ನಿರ್ಗತಿಕರಿಗೆ ಯಾವಾಗಲೂ ಕೂಡ ಪ್ರೀತಿ, ಗೌರವವನ್ನು ನೀಡುತ್ತಿದ್ದರು. ಈ ಮೂಲಕ ದೇಶಾಭಿಮಾನ ಮೂಡುವಂತಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲ ಮಹೇಶ ನಿಟಿಲಾಪುರ ಮಾತನಾಡಿ ವಿದ್ಯಾರ್ಥಿಗಳು ಚರಿತ್ರೆಯ ಬಗ್ಗೆ ತಿಳಿದುಕೊಂಡು ಐತಿಹಾಸಿಕ ವ್ಯಕ್ತಿಗಳ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಈ ಮೂಲಕ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕಿ ಯಶವಂತಿ ಡಿ. ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕ ಮಯೂರ್ ಬಿ.ಜೆ ಸ್ಯಾಗತಿಸಿ ವಿದ್ಯಾರ್ಥಿನಿ ಪದ್ಮಾರೈ ವಂದಿಸಿದರು. ವಿದ್ಯಾರ್ಥಿನಿ ಈಶ್ವರಿ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು