Sunday, January 19, 2025
ಪುತ್ತೂರು

ಉಪ್ಪಿನಂಗಡಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಕಳ್ಳ, ಬರೋಬ್ಬರಿ 15 ಪೊಲೀಸ್ ಠಾಣೆಗಳಲ್ಲಿ 30 ಕಳ್ಳತನ ಪ್ರಕರಣ ದಾಖಲು-ಕಹಳೆ ನ್ಯೂಸ್

ಉಪ್ಪಿನಂಗಡಿ: 15 ಪೊಲೀಸ್ ಠಾಣೆಗಳಲ್ಲಿ 30ಕ್ಕೂ ಹೆಚ್ಚು ದಾಖಲಾಗಿರುವ ಕಳ್ಳತನ ಪ್ರಕರಣಕ್ಕೆ ಸಂಬ0ಧಿಸಿದ0ತೆ ಆರೋಪಿವೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಉಪ್ಪಿನಂಗಡಿ ಠಾಣಾ ಪಿಎಸ್‌ಐ ಈರಯ್ಯ.ಡಿ.ಎನ್ ಅವರ ನೇತೃತ್ವದಲ್ಲಿ ಅಪರಾಧ ಪತ್ತೆ ತಂಡವನ್ನು ರಚಿಸಿ, ಕಳ್ಳರ ಬಂಧನಕ್ಕೆ ಬಲೆ ಬೀಸಲಾಗಿತ್ತು. ಇದೀಗ ಪ್ರಕರಣ ಬೇಧಿಸಿರುವ ಉಪ್ಪಿನಂಗಡಿ ಪೊಲೀಸರು, ಬೆಳ್ತಂಗಡಿ ತಾಲೂಕಿನ ಪಡಂಗಡಿ ನಿವಾಸಿ ಹಮೀದ್ ಯಾನೆ ಕುಂಞ ಮೋನು ಎಂಬಾತನನ್ನು ಬಂಧಿಸಿದ್ದಾರೆ. ಹಮೀದ್ ಮೇಲೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ನಗರ, ಹಾಸನ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿನ 15 ಪೊಲೀಸ್ ಠಾಣೆಗಳಲ್ಲಿ ಸುಮಾರು 30 ಕ್ಕಿಂತಲೂ ಹೆಚ್ಚಿನ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಇನ್ನು ಪೊಲೀಸ್ ಅಧೀಕ್ಷಕರಾದ ಲಕ್ಷ್ಮಿ ಪ್ರಸಾದ್ ಹಾಗೂ ಪುತ್ತೂರು ಉಪ ವಿಭಾಗದ ಉಪಾಧೀಕ್ಷಕರಾದ ಗಾನ.ಪಿ ಕುಮಾರ್ ಅವರ ನಿರ್ದೇಶನದಲ್ಲಿ ಮತ್ತು ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾದ ಉಮೇಶ್ ಉಪ್ಪಳಿಕೆ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಪ್ರಕರಣವನ್ನು ಬೇಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು