Sunday, January 19, 2025
ಪುತ್ತೂರು

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳು ಪ್ರಾರಂಭದಿ0ದಲೇ ತಮ್ಮ ಗುರಿಯನ್ನು ತಲುಪಬೇಕು ಅನ್ನುವ ದೃಷ್ಟಿಯಿಂದ ತಯಾರಿಗಳನ್ನು ಆರಂಭಿಸಬೇಕು: ಕೃಷ್ಣ ಶೆಣೈ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳು ಪ್ರಾರಂಭದಿ0ದಲೇ ತಮ್ಮ ಗುರಿಯನ್ನು ತಲುಪಬೇಕು ಅನ್ನುವ ದೃಷ್ಟಿಯಿಂದ ತಯಾರಿಗಳನ್ನು ಆರಂಭಿಸಬೇಕು.

ಉನ್ನತ ಶಿಕ್ಷಣವನ್ನು ಪಡೆಯಲಿಚ್ಚಿಸುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಗಿಸಿದ ನಂತರವೇ ಉದ್ಯೋಗ ಕ್ಷೇತ್ರಕ್ಕೆ ಕಾಲಿಡಬೇಕು. ಇಲ್ಲದಿದ್ದರೆ ಶಿಕ್ಷಣಕ್ಕೆ ಪೂರ್ಣಾಸಕ್ತಿಯನ್ನು ತೋರಿಸಲು ಸಾದ್ಯವಿಲ್ಲ. ಎಂದು ಕೆ. ವಿ. ಶೆಣೈಯ ಸಹಮಾಲಿಕ ಹಾಗೂ ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ಕೃಷ್ಣ ಶೆಣೈ ಹೇಳಿದರು. ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ಐಕ್ಯೂಎಸಿ ಘಟಕ, ವಾಣಿಜ್ಯ ವಿಭಾಗ ಮತ್ತು ಪ್ಲೇಸ್‌ಮೆಂಟ್ ಮತ್ತು ಟ್ರೈನಿಂಗ್ ಸೆಲ್ ಸಂಯುಕ್ತ ಆಶ್ರಯದಲ್ಲಿ ಅಯೋಜಿಸಿದ ‘ಪಿಜಿಸಿಇಟಿ ಟ್ರೈನಿಂಗ್ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಶನಿವಾರ ಅವರು ಮಾತನಾಡಿದರು. ಪಿಜಿಸಿಇಟಿ ಪರೀಕ್ಷೆ ಎಂಬಿಎ ಕ್ಷೇತ್ರಕ್ಕೆ ಕಾಲಿಡುವ ಮೊದಲ ಹಂತ. ಹಲವು ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕೆ ಎಂಬಿಎಯನ್ನು ಆಯ್ಕೆ ಮಾಡಬೇಕೆಂಬ ಆಸಕ್ತಿಯನ್ನು ಹೊಂದಿರುತ್ತಾರೆ. ಅವರಿಗೆ ಮಾರ್ಗದರ್ಶನದ ಕೊರತೆಯಿಂದ ಯಾವ ಕ್ಷೇತ್ರವನ್ನು ಆಯ್ಕೆ ಮಾಡಬೇಕೆಂದು ತಿಳಿದಿರುವುದಿಲ್ಲ. ಕಾಲೇಜಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ವಿದ್ಯಾರ್ಥಿಗಳಿಗೆ ತುಂಬಾ ಸಹಾಯವಾಗಲಿದೆ. ವಿದ್ಯಾರ್ಥಿಗಳು ಕಾಲೇಜಿನಲ್ಲಿ ಸಿಗುವ ಪ್ರತಿಯೊಂದು ಅವಕಾಶಗಳನ್ನು ಸದುಪಯೋಗಿಸಿಕೊಳ್ಳಬೇಕು ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಮಾತನಾಡಿ, ಕಾಲೇಜಿನ ಹಲವು ವಿಭಾಗಗಳು ವಿದ್ಯಾರ್ಥಿಗಳ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಉಪಯೋಗವಾಗುವಂತಹ ಅನೇಕ ಚಟುವಟಿಕೆಗಳನ್ನು ಅಯೋಜಿಸುತ್ತಿದೆ. ವಿದ್ಯಾರ್ಥಿ ತನ್ನ ಶಿಕ್ಷಣ ಮುಗಿಸಿ ಪದವಿಯನ್ನು ಪಡೆಯುವುದು ದೊಡ್ಡ ವಿಷಯವಲ್ಲ. ಪದವಿ ನಂತರ ಉದ್ಯೋಗ ಕ್ಷೇತ್ರಕ್ಕೆ ಕಾಲಿಡಲು ಎಷ್ಟು ಪ್ರಬುದ್ಧರಾಗಿದ್ದೇವೆ ಅನ್ನುವ ವಿಷಯ ಮುಖ್ಯವಾಗುತ್ತದೆ. ಕಾಲೇಜು ನೀಡುವ ತರಬೇತಿಗಳಲ್ಲಿ ವಿದ್ಯಾರ್ಥಿಗಳು ಉತ್ಸುಕತೆಯಿಂದ ಭಾಗವಹಿಸಬೇಕು. ಹೀಗಾದಲ್ಲಿ ಮಾತ್ರ ಉತ್ತಮ ಯಶಸ್ಸನ್ನು ಗಳಿಸಲು ಸಾದ್ಯ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿನಿ ಸೌಮ್ಯ ಪ್ರಾರ್ಥಿಸಿದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ರೇಖಾ ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕ ಗೌತಮ್ ಪೈ ಪ್ರಸ್ತಾವನೆಗೈದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ರವಿಕಲಾ ವಂದಿಸಿ, ಉಪನ್ಯಾಸಕ ಮುಕುಂದ ಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು