Sunday, January 19, 2025
ಸುದ್ದಿ

ಹಾಸನ ಬೆಳ್ಳಂಬೆಳಗ್ಗೆ ಭೀಕರ ಅಪಘಾತ-ಕಹಳೆ ನ್ಯೂಸ್

ಹಾಸನ: ಭಾನುವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಶಾಂತಿಗ್ರಾಮದ ಹತ್ತಿರ ಕೆಂಚಟ್ಟಹಳ್ಳಿ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಾಟಾ ಸುಮೋಗೆ ಕ್ವಾಲೀಸ್‌ ಕಾರ್‌ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕ್ವಾಲೀಸ್‌ ಕಾರ್‌ನಲ್ಲಿದ್ದ 4 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಮೃತರನ್ನು ಪ್ರದೀಪ್ ಕುಮಾರ್, ಚಂದ್ರಶೇಖರ್, ನವೀನ್ ಕುಮಾರ್, ಸುನೀಲ್ ಕುಮಾರ್ ಎಂದು ಗುರುತಿಸಲಾಗಿದೆ.ಕೆಂಚಟ್ಟಹಳ್ಳಿ ಬಳಿ ರೋಡ್‌ ಹಂಪ್ಸ್‌ ಇದ್ದು, ಹಂಪ್ಸ್‌ ಬಳಿ ಟಾಟಾ ಸುಮೋ ನಿಧಾನ ಮಾಡಿದಾಗ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಕ್ವಾಲೀಸ್‌ ಕಾರು ಡಿಕ್ಕಿಯೊಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಟಾಟಾ ಸುಮೋ ಪಲ್ಟಿಯಾಗಿದ್ದು, ಅದರಲ್ಲಿದ್ದ 10 ಮಂದಿಯೂ ಗಾಯಗೊಂಡಿದ್ದಾರೆ. ಅಪಘಾತ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಿವಾಸ್‌ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು